ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ; ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ

Date:

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರಿಂದ ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

“ಪ್ರದೀಪ್ ಈಶ್ವರ್ ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸುಧಾಕರ್ ಅವರನ್ನು ಸೋಲಿಸಿದ್ದರು. ಇಬ್ಬರ ನಡುವೆ ರಾಜಕೀಯ ವೈರುಧ್ಯಗಳಿದ್ದೇ ಇದೆ. ಇದೇ ಕಾರಣಕ್ಕೆ ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಸುಧಾಕರ್ ಒಂದೇ ಒಂದು ವೋಟ್‌ನಿಂದ ಗೆದ್ದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ, ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ” ಎಂದು ಪ್ರದೀಪ್ ಶಪಥ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಿನ್ನೆ ಸುಧಾಕರ್ ಗೆಲ್ಲುತ್ತಿದ್ದಂತೇ ಪ್ರದೀಪ್ ಹಳೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಟ್ರೋಲ್ ಆಗಿದ್ದವು. ಇದೆಲ್ಲ ಬೆಳವಣಿಗೆ ನಡುವೆ ನಿನ್ನೆ ರಾತ್ರಿ ಪ್ರದೀಪ್ ನಿವಾಸಕ್ಕೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.‌

“ಕಿಡಿಗೇಡಿಗಳು ಕಲ್ಲು ಎಸೆಯುತ್ತಿದ್ದಾಗ ಸಿಸಿಟಿವಿ ಸೆನ್ಸರ್ ಆನ್ ಆಗಿದ್ದು ಕಿಡಿಗೇಡಿಗಳು ಓಡಿ ಹೋಗಿದ್ದಾರೆ” ಎಂದು ಪ್ರದೀಪ್ ಮನೆಯ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರನ್ನು ಸಂಪರ್ಕಿಸಿದಾಗ ಮಾತನಾಡಿದ ಅವರು, “ರಾತ್ರಿ ಸುಮಾರು 10-15ರ ಹೊತ್ತಿಗೆ ಈ ಘಟನೆ ನಡೆದಿದೆ. ನಾಲ್ಕೈದು ಹುಡುಗರ ತಂಡ ಶಾಸಕರ ಮನೆಗೆ ಕಲ್ಲೆಸೆದಿದ್ದಾರೆ.  ಇದರಿಂದ ಒಂದೆಡೆ ಕಿಟಿಕಿ ಗಾಜುಗಳಿಗೆ ಹಾನಿಯಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ದಲಿತ ಕಾಲೋನಿಯಲ್ಲಿ ಅನಧಿಕೃತ ಮೊಬೈಲ್ ಟವರ್‌ ನಿರ್ಮಾಣ; ತೆರವುಗೊಳಿಸುವಂತೆ ದಸಂಸ ಆಗ್ರಹ

“ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದೇವೆ. ಯಾವುದರ ಕುರಿತು ಹೀಗಾಗಿದೆ ಎಂಬುದು ತಿಳಿದುಬಂದಿಲ್ಲ. ಸಿಸಿಟಿವಿ ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದೇವೆ. ತನಿಖೆಯ ಬಳಿಕವಷ್ಟೇ ಮಾಹಿತಿ ಗೊತ್ತಾಗಬೇಕಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...