ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಮುಂಭಾಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತವಾಗಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಶಿಡ್ಲಘಟ್ಟ ರಸ್ತೆಯಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದಲ್ಲಿ ಪತಿ ಮತ್ತು ಪತ್ನಿ ಕೊಮ್ಮಸಂದ್ರ ಗ್ರಾಮದಿಂದ ಚಿಂತಾಮಣಿ ತಾಲೂಕಿನ ಹೊರವಲಯದ ನಾರಾಯಣಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ ಶಿಡ್ಲಘಟ್ಟ ತಾಲೂಕಿನ ಬುರುಡುಗುಂಟೆ ಪಂಚಾಯಿತಿ ವ್ಯಾಪ್ತಿಯ ಕೊಮ್ಮಸಂದ್ರ ಗ್ರಾಮದ ನಿವಾಸಿ ವೆಂಕಟೇಶಪ್ಪ(39) ಮತ್ತು ಪತ್ನಿ ಸರಸ್ವತಮ್ಮ(35) ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿಯಿಂದ ಮೈಸೂರಿಗೆ ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ
ಮೃತ ದಂಪತಿ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ರಸ್ತೆ ಮಾರ್ಗದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಪಿ. ಮುರಳಿಧರ್, ನಗರ ಸರ್ಕಲ್ ಇನ್‌ಸ್ಪೆಕ್ಟರ್ ವಿಜಿ ಕುಮಾರ್, ಗ್ರಾಮಾಂತರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಮತಾ ಭೇಟಿ ನೀಡಿ ಸ್ಥಳದಲ್ಲೇ ಮೃತಪಟ್ಟಿದ್ದ ಮೃತ ದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.