ಚಿಕ್ಕಬಳ್ಳಾಪುರ | ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ಸಾವು

Date:

  • ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
  • ಶ್ರೀನಿವಾಸ ಸಾಗರಕ್ಕೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು

ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರಿನ ಲಿಂಗರಾಜಪುರದ ಪೂಜಾ (21), ನಾಗವಾರ ಬಳಿಯ ಅಮರಜ್ಯೋತಿ ನಗರದ ಇಮ್ರಾನ್ ಖಾನ್ (21), ಯಲಹಂಕದ ರಾಧಿಕಾ (21) ಮೃತ ದುರ್ದೈವಿಗಳು.

ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿ.ಫಾರ್ಮ್ ಓದುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ಪೈಕಿ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದು, ಚನ್ನರಾಮ, ಸುನೀತಾ ಮತ್ತು ವಿಕಾಸ್ ಎಂಬುವವರು ಅಪಾಯದಿಂದ ಪಾರಾಗಿದ್ದಾರೆ. 

ಈ ಸುದ್ದಿ ಓದಿದ್ದೀರಾ? ರಾಮನಗರ | ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಪುನೀತ್‌ ಕೆರೆಹಳ್ಳಿ ಬಂಧನಕ್ಕೆ ಆಗ್ರಹ‌

ಜಲಾಶಯದ ಹಿನ್ನೀರಿಗೆ ಇಳಿದಾಗ ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಜಲಾಶಯದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಪೂಜಾ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಿಕ್ಷಕರ ಗೈರು ಹಾಜರಿ ತಡೆಗೆ ‘ಜಿಪಿಎಸ್‌’ ಕ್ರಮ

ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ...

ಪುರುಷ ನೌಕರರಿಗೂ ಶಿಶುಪಾಲನಾ ರಜೆ; ಸರ್ಕಾರ ಆದೇಶ

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ಶಿಶುಪಾಲನಾ ರಜೆಯನ್ನು ಒಂಟಿ ಪೋಷಕರಾಗಿರುವ ಪುರುಷ...

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...