ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದ ಇಬ್ಬರು ಸಹೋದರಿಯರು ಮೇಲೆ ಬರಲಾಗದೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ರಾಧಾ (17) ಹಾಗೂ ಸಾಹಿತಿ (14) ಎಂದು ಗುರುತಿಸಲಾಗಿದೆ.
ಬೇಸಿಗೆ ರಜೆ ಇದ್ದ ಕಾರಣ ತಾಯಿಯ ಜತೆ ತೋಟದಲ್ಲಿ ಕೆಲಸ ಮಾಡುವಾಗ ಕೃಷಿ ಹೊಂಡಕ್ಕೆ ಅಳವಡಿಸಿದ್ದ ಪೈಪ್ ಸರಿ ಮಾಡಲು ಹೋಗಿ ಅಕ್ಕ ತಂಗಿ ಇಬ್ಬರೂ ಕಾಲು ಜಾರಿ ಬಿದ್ದಿದ್ದಾರೆ. ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ | ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಿ; ರೈತ ಸಂಘ ಮನವಿ