ಚಿಕ್ಕಮಗಳೂರು | ಓವರ್ ಡೋಸ್ ಇಂಜೆಕ್ಷನ್‌ಗೆ ಏಳು ವರ್ಷದ ಬಾಲಕ‌ ಬಲಿ: ವೈದ್ಯ ಪರಾರಿ

Date:

ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.

- Advertisement -

ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬುವವರ ಏಳು ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದನು. ಹೀಗಾಗಿ ಬಾಲಕನನ್ನು ಪೋಷಕರು ಅಜ್ಜಂಪುರ ಪಟ್ಟಣದ ‘ವೈದ್ಯ(Y-DYA)’ ಎಂಬ ಖಾಸಗಿ ಕ್ಲಿನಿಕ್‌ ನಡೆಸುತ್ತಿರುವ ಡಾ. ವರುಣ್ ಬಳಿ ಸೆಪ್ಟೆಂಬರ್ 24ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ದರು. ವೈದ್ಯ ವರುಣ್, ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು, ಇದೇ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾನೆ. ಬಾಲಕ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ವೈದ್ಯ ವರುಣ್ ಕ್ಲಿನಿಕ್ ಬಂದ್‌ ಮಾಡಿ, ಪರಾರಿಯಾಗಿದ್ದಾನೆ.

ಚಿಕ್ಕಮಗಳೂರು

ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ. ಇನ್ನೂ ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ. ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಲೋಕಾಯುಕ್ತ ವಿಚಾರಣೆ | ‘ಸುಳ್ಳು’ ಹೇಳುತ್ತಲೇ ‘ಸತ್ಯ’ ಬಹಿರಂಗಪಡಿಸಿದ ಎಚ್ ಡಿ ಕುಮಾರಸ್ವಾಮಿ!

ಬಿಎಎಂಎಸ್‌ ವ್ಯಾಸಂಗ ಮಾಡಿರುವ ವರುಣ್ ಮಕ್ಕಳಿಗೆ ಇಂಜೆಕ್ಷನ್ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಇಂಜೆಕ್ಷನ್ ನೀಡಿರುವುದಕ್ಕೆ ಅಜ್ಜಂಪುರ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಾರ್ವಜನಿಕರು ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಈ ಬಗ್ಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ವೈದ್ಯನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...