ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಚಿಕ್ಕಮಗಳೂರು ನಗರದಲ್ಲಿ ಮಂಗಳವಾರ ತಾಲೂಕು ಕಚೇರಿಯಿಂದ ಜಾಗೃತಿ ಜಾಥಾ ನಡೆಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: 60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಮೆರವಣಿಗೆಯ ಜಾಥಾದಲ್ಲಿ ಡೊಳ್ಳು ಕುಣಿತದೊಂದಿಗೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ಏಡ್ಸ್ ರೋಗದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿನಿಂದ ನೆರವೇರಿತು.
