ಹಸುವಿಗೆ ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿ ಬೈಕ್ ಸವಾರನ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ಶನಿವಾರ ನಡೆದಿದೆ.
ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮ ವಿಶ್ವೇಂದ್ರ(43) ಎಂಬ ದುರ್ದೈವಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ದೇಹ ಛಿದ್ರ ಛಿದ್ರವಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ನುಗ್ಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ
ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರಿಯಾಗಿದ್ದ ಲಕ್ಷ್ಮಿ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದುಬಂದಿದೆ.