ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯಿಂದ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮುರುಡಪ್ಪ ಆದೇಶ ಹೊರಡಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ವಿಚಾರದಲ್ಲಿ ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಜಟಾಪಟಿ ನಡೆಯುತ್ತಿದೆ. ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ವರಸಿದ್ಧಿ ವೇಣುಗೋಪಾಲ್ ಇತ್ತೀಚೆಗೆ ರಾಜೀನಾಮೆ ಹಿಂಪಡೆದು ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧನ
20 ವರ್ಷಗಳಿಂದ ಸಿ.ಟಿ ರವಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಣುಗೊಪಾಲ್, ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚಿಸಿದರೂ ಕೂಡ ರಾಜಿನಾಮೆ ನೀಡಿರಲಿಲ್ಲ. ಎರಡು ಬಾರಿ ರಾಜಿನಾಮೆ ನೀಡಿ ಅಂಗೀಕಾರವಾಗುವ ಮುನ್ನವೇ ಹಿಂಪಡೆದಿದ್ದರು. ಪಕ್ಷದ ಆಂತರಿಕ ತೀರ್ಮಾನವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.