ಚಿಕ್ಕಮಗಳೂರು | ಸಿಲಿಂಡ‌ರ್ ಸ್ಫೋಟ; ಗುಡಿಸಲು ಸಂಪೂರ್ಣ ಭಸ್ಮ

Date:

ಸಿಲಿಂಡ‌ರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.

- Advertisement -

ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡ‌ರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಸಟ್ಟು ಕರಕಲಾಗಿ ಇಡೀ ಗುಡಿಸಲೇ ಬೂದಿಯಾಗಿದೆ. ಬಸಯ್ಯ ಹಿರೇಮಠಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಓದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಸಿಲಿಂಡರ್ ಸ್ಫೋಟದ ವಿಷಯ ತಿಳಿದು ಕೂಲಿಯಿಂದ ವಾಪಸ್‌ ಬಂದ ಬಸಯ್ಯ ಹಿರೇಮಠ, ಗುಡಿಸಲಿನ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...