ಚಿಕ್ಕಮಗಳೂರು | ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ; ಕ್ರಮಕ್ಕೆ ದಸಂಸ ಆಗ್ರಹ

Date:

ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆಮಾಡದಂತೆ ಕ್ರಮ ವಹಿಸಬೇಕು ಎಂದು ದಸಂಸ ಮುಖಂಡರು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಈ ಕುರಿತು ದಸಂಸ ಮಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಅವರಿಗೆ ಮನವಿ ಸಲ್ಲಿಸಿ, “ದಲಿತ ಸಮುದಾಯಕ್ಕೆ ಮೀಸಲಿರಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದರೆ ವಿಶ್ವಾಸ ದ್ರೋಹವೆಸಗಿದಂತೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದಸಂಸ ಜಿಲ್ಲಾ ಸಂಚಾಲಕ ಪಿ ಟಿ ಚಂದ್ರಶೇಖರ್ ಮಾತನಾಡಿ, “ಎಸ್‌ಸಿ/ಎಸ್‌ಟಿಗಳ ವಿಶೇಷ ಅನುದಾನದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಸುತ್ತಿರುವುದು ಖಂಡನೀಯ. ಗ್ಯಾರಂಟಿ ಯೋಜನೆ ಸಾಮಾನ್ಯ ಕಾರ್ಯಕ್ರಮವಾದ ಕಾರಣ ದಲಿತರ ಮೀಸಲು ಬಳಸದಂತೆ ಕ್ರಮ ವಹಿಸಬೇಕು. ದಲಿತರನ್ನು ಆರ್ಥಿಕವಾಗಿ ಬಲಪಡಿಸುವ ಉದ್ದೇಶದಿಂದ ವಿಶೇಷವಾಗಿ ಮೀಸಲಿಟ್ಟಿರುವ ಹಣವನ್ನು ದಲಿತರಿಗೆ ಮಾತ್ರ ಸೀಮಿತಗೊಳಿಸಬೇಕು” ಎಂದು ಆಗ್ರಹಿಸಿದರು.

“ಹಿಂದಿನ ಸರ್ಕಾರ ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಮೀಸಲು ಹಣ ದುರುಪಯೋಗ ಆಗದಂತೆ ತಪ್ಪಿಸಲು ಸರ್ಕಾರ ಕೂಡಲೇ 7ಸಿ ಕಾಯ್ದೆಯನ್ನು ರದ್ದುಪಡಿಸಬೇಕು. ಒಂದು ವೇಳೆ ಗ್ಯಾರಂಟಿ ಯೋಜನೆಗಳಿಗೆ ಮೀಸಲು ಹಣ ಮುಂದುವರೆಸಿದಲ್ಲಿ ಸರ್ಕಾರದ ವಿರುದ್ಧ ದಲಿತರು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೆಸರುಗದ್ದೆಯಂತಾದ ರಸ್ತೆಗಳು; ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಟ್ಟು ರೈತರ ಆಕ್ರೋಶ 

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ್ ರಾಜರತ್ನಂ, ಹಾದಿಹಳ್ಳಿ ಪುಟ್ಟಸ್ವಾಮಿ, ತಾಲೂಕು ಸಂಚಾಲಕ ಅಶೋಕ್ ಹಾದಿಹಳ್ಳಿ, ಸಂಘಟನಾ ಸಂಚಾಲಕ ಪೂರ್ಣೇಶ್, ಮುಖಂಡರುಳಾದ ದಿವಾಕರ್, ಮಂಜುನಾಥ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...