ಚಿಕ್ಕಮಗಳೂರು | ಮೃತ ಶಿಕ್ಷಕ ಸಾಲ; ಶೇ. 9ರಷ್ಟು ಬಡ್ಡಿ ಸಮೇತ ಪಾವತಿಸಲು ಆದೇಶ 

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮೃತ ಶಿಕ್ಷಕನ ಸಾಲ ಮರುಪಾವತಿ ಮಾಡಲ್ಲ ಎಂದ ವಿಮಾ ಕಂಪನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಶೇಕಡಾ 9 ರಷ್ಟು ಬಡ್ಡಿ ಸಮೇತ ನೀಡುವೆಂತೆ ಆದೇಶ ನೀಡಿದೆ.

- Advertisement -

ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಸಾಲ ಪಡೆದ ಸರಕಾರಿ ಶಿಕ್ಷಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಾಲ ಮರುಪಾವತಿಗೆ ವಿಮಾ ಹಣವನ್ನು ಭರಿಸದ ವಿಮಾ ಕಂಪನಿಯ ವಿರುದ್ಧ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಡ್ಡಿ ಸಹಿತ ಹಣ ಪಾವತಿಸುವಂತೆ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ 2025ರ ಜುಲೈ 8 ರಂದು ಎಕ್ಸೈಡ್‌ ಜೀವ ವಿಮಾ ಕಂಪನಿಯ ಬೆಂಗಳೂರು ಕಚೇರಿಯ ವ್ಯವಸ್ಥಾಪಕರು ಹಾಗೂ ಚಿಕ್ಕಮಗಳೂರು ಶಾಖಾ ವ್ಯವಸ್ಥಾಪಕರು, ಶಿಕ್ಷಕರ ಸಹಕಾರ ಬ್ಯಾಂಕ್‌ನ ಉಡುಪಿ ಪ್ರಧಾನ ಕಚೇರಿ ಮತ್ತು ಚಿಕ್ಕಮಗಳೂರು ಶಾಖೆಯ ವ್ಯವಸ್ಥಾಪಕರ ವಿರುದ್ಧ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಆಯೋಗವು ಜನವರಿ 23ರಂದು ತೀರ್ಪು ನೀಡಿದ್ದು, ಎಕ್ಸೈಡ್‌ ಜೀವ ವಿಮಾ ಕಂಪನಿಯ ಬೆಂಗಳೂರು ಕಚೇರಿ ಹಾಗೂ ಚಿಕ್ಕಮಗಳೂರು ಶಾಖಾ ಕಚೇರಿ ವಿರುದ್ಧದ ದೂರನ್ನು ಖರ್ಚಿನೊಂದಿಗೆ ಭಾಗಶಃ ಪುರಸ್ಕರಿಸಿ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಉಡುಪಿ ಪ್ರಧಾನ ಕಚೇರಿ ಮತ್ತು ಚಿಕ್ಕಮಗಳೂರು ಶಾಖೆ ವಿರುದ್ಧದ ದೂರನ್ನು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

ವಿಮಾ ಕಂಪನಿಯು ವಿಮಾ ಪರಿಹಾರ ಮೊತ್ತ 11.50 ಲಕ್ಷ ರೂ.ಗಳನ್ನು 2024ರ ಫೆಬ್ರವರಿ 8 ರಿಂದ ಈವರೆಗೆ ವಾರ್ಷಿಕ ಶೇಕಡಾ 9 ರ ಬಡ್ಡಿ ಸಹಿತ ಪಾವತಿಸುವಂತೆ ಆದೇಶಿಸಲಾಗಿದೆ. ಅಲ್ಲದೆ, ಪರಿಹಾರವಾಗಿ 40 ಸಾವಿರ ರೂ. ಹಾಗೂ ವ್ಯಾಜ್ಯದ ಖರ್ಚು ವೆಚ್ಚವೆಂದು 10 ಸಾವಿರ ರೂ.ಗಳನ್ನು ಜಯಂತಿ ಅವರಿಗೆ ನೀಡುವಂತೆ ಆದೇಶ ನೀಡಲಾಗಿದೆ. ತಪ್ಪಿದಲ್ಲಿ ಆದೇಶದ ಮೊತ್ತಕ್ಕೆ ಶೇಡಕಾ 6 ಭವಿಷ್ಯ ಬಡ್ಡಿಯನ್ನು ಪಾವತಿಸುವಂತೆ ಆದೇಶಿಸಿದೆ. ಆಯೋಗದ ಅಧ್ಯಕ್ಷರಾದ ಎನ್‌.ಆರ್‌.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಎಂ.ಬಮ್ಮನಕಟ್ಟಿ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿಅರ್ಜಿದಾರರ ಪರವಾಗಿ ವಕೀಲರಾದ ಎಂ.ಕೆ.ರಮೇಶ್‌ ಅವರು ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...