ಚಿಕ್ಕಮಗಳೂರು | ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ, ಒತ್ತುವರಿ ತೆರವು ಕೈಬಿಡಿ: ಭೂ ಸಾಗುವಳಿ ಹೋರಾಟ ಸಮಿತಿ ಆಗ್ರಹ

Date:

ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಅರಣ್ಯ ಭೂಮಿ ಒತ್ತುವರಿ ತೆರವು ಕೈಬಿಡುವಂತೆ ಭೂ ಸಾಗುವಳಿ ಹೋರಾಟ ಸಮಿತಿಯಿಂದ ಮಂಗಳವಾರದಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಕಡವಂತಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದಪ್ರತಿಭಟನಾಕಾರರು ಗ್ರಾ.ಪಂ. ಅಧ್ಯಕ್ಷರು, ಪಿಡಿಒ ಮತ್ತು ಮುಖ್ಯಮಂತ್ರಿ ಸಿದ್ದರಾಮ್ಯನವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈಗಾಗಲೇ ಅರಣ್ಯ ಒತ್ತುವರಿ ತೆರವು ಕಾರ್ಯವನ್ನು ಕೈಗೆತ್ತಿಕೊಂಡಿದೆ. ಇದರಿಂದ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡಿರುವವರ ಬದುಕು ಆತಂತ್ರವಾಗಲಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ, ಕಾರ್ಪೊರೇಟ್ ಕುಟುಂಬಗಳಿಗೆ, ರಾಜಕಾರಣಿಗಳಿಗೆ ನೂರಾರು, ಸಾವಿರಾರು ಎಕರೆ ಭೂಮಿಯನ್ನು ಯಾವುದೇ ಷರತ್ತುಗಳಿಲ್ಲದೆ ಆಳೆದುಕೊಡುವ ಸರ್ಕಾರಗಳು, ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡಿರುವವರನ್ನು, ಅರಣ್ಯ ಡೀಮ್ಸ್, ಸೆಕ್ಷನ್ 4(1) ಇತ್ಯಾದಿ ಹೆಸರಲ್ಲಿ ಸಣ್ಣ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿವೆ” ಎಂದು ಪ್ತಿಭಟನಾಕಾರರು ಆರೋಪಿಸಿದರು.

“ಓಟ್ ಬ್ಯಾಂಕ್‌ಗಾಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳು ಜನರ ಜೀವನ ಭದ್ರತೆ ವಿಷಯದಲ್ಲಿ ಜಾಣ ಕುರುಡು ಪ್ರದರ್ಶಿಸುತ್ತವೆ. ಅರಣ್ಯ ಕಂದಾಯ ಇಲಾಖೆಗಳ ನಡುವೆ ಭೂಮಿಗೊಂದಲವಿದ್ದು, ಜಂಟಿ ಸರ್ವೆ ನಡೆಸದೆ ಅರಣ್ಯ ಒತ್ತುವರಿ ತೆರವಿಗೆ ಮುಂದಾಗಿದೆ. ನೂರಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಫಾರಂ 53, 57ರ ಆಡಿ ಅರ್ಜಿ ಸಲ್ಲಿಸಿ ಸಾಗುವಳಿ ಪತ್ರಕ್ಕಾಗಿ ಹೋರಾಟ ನಡೆಸುತ್ತಿರುವ ಸಾಗುವಳಿದಾರರಿಗೆ ಸರ್ಕಾರ ಹಕ್ಕುಪತ್ರ ನೀಡದೆ, ಅರಣ್ಯ ತೆರವು ಕಾರ್ಯಕ್ಕೆ ಮುಂದಾಗಿರುವುದು ಅವೈಜ್ಞಾನಿಕವಾಗಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಮಟ್ಟದ ಹೋರಾಟವನ್ನು ನಡೆಸುತ್ತೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸೆ.5ರಂದು ಜಿ ಒ ಮಹಂತಪ್ಪನವರಿಗೆ ಶ್ರದ್ಧಾಂಜಲಿ, ನುಡಿನಮನ

ಭೂ ಸಾಗುವಳಿ ಹೋರಾಟ ಸಮಿತಿ ಉಮೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿದವರನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು. ಅರಣ್ಯ ಕಂದಾಯ ಜಂಟಿ ಸರ್ವೆ ನಡೆಸಿ, ಗಡಿ ಗುರುತಿಸಬೇಕು. ಡೀಮ್ಸ್ ಅಥವಾ ಸೆಕ್ಷನ್ 4(1) ಕೈ ಬಿಡಬೇಕು. ನೂರಾರು ವರ್ಷಗಳಿಂದ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡಿರುವವರಿಗೆ ಕೂಡಲೇ ಸಾಗುವಳಿ ಪತ್ರ ವಿತರಿಸಬೇಕು” ಎಂದು ಆಗ್ರಹಿಸಿದರು.

ಕಡವಂತಿ ಪಂಚಾಯಿತಿ ವ್ಯಾಪ್ತಿಯ ಬೊಗಸೆ, ಬಿಳುಗುಳ, ಕಡವಂತಿ, ಬಾಸಾಪುರ ಗ್ರಾಮದ ಗ್ರಾಮಸ್ಥರು, ಹೋರಾಟ ಸಮಿತಿಯ ಶಿವಣ್ಣ ಗೌಡ, ಶಿವಶಂಕರ ಗೌಡ, ಹಿರಿಯಣ್ಣ ಗೌಡ, ಮಂಜಪ್ಪ ಗೌಡ, ಬಾಸಾಪುರ ಅಣ್ಣಪ್ಪ, ಕೆ ಆರ್ ಅಣ್ಣೇಗೌಡ, ಬಿ ಎನ್ ವಿಶ್ವನಾಥ್, ಬೊಗಸೆ ಪರಮೇಶ್, ಉಮೇಶ್, ಮುಳ್ಳೇಶ್ ಗೌಡ, ಮುಕುಂದ ಶೆಟ್ಟಿ, ವಿನೋದ, ಬಿಳಗೊಳ ವಾಸು, ಬಸಾಪುರದ ಮನೋಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...