ಚಿಕ್ಕಮಗಳೂರು | ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಅಮಾನತು

Date:

ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ದೇವೇಂದ್ರ ಅವರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

- Advertisement -

ಕಳೆದ ಸರ್ಕಾರಿ ನೌಕರರ ಚುನಾವಣೆ ವೇಳೆ ವಿಧಾನಪರಿಷತ್‌ ಸದಸ್ಯ ಭೋಜೇಗೌಡ ಅವರು ನೂತನ ಅಧ್ಯಕ್ಷ ದೇವೇಂದ್ರ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಆಮಿಷ ಒಡ್ಡಿದ್ದಾರೆಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಸಿಂಧು ಬಿ ರೂಪೇಶ್ ಅವರು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚುನಾವಣೆಯ ವೇಳೆ ಪತ್ರಿಕಾಗೋಷ್ಠಿ ನಡೆಸಿದ್ದ ಭೋಜೇಗೌಡರು, “ದೇವೇಂದ್ರ ಅವರು ಸರ್ಕಾರಿ ನೌಕರರಿಗೆ ಬೆದರಿಕೆ ಒಡ್ಡಿದ್ದರು. ಚುನಾವಣೆಯಲ್ಲಿ ಹಣ ಹಾಗೂ ಬೆಳ್ಳಿಯ ಬಟ್ಟಲುಗಳನ್ನು ನೀಡುವುದಾಗಿ ಮತದಾರರಿಗೆ ಆಮಿಷವೊಡ್ಡಿ, ಆ ವಸ್ತುಗಳನ್ನು ನೀಡಿದ್ದಾರೆ” ಎಂದು ಆರೋಪಿಸಿ ದೂರು ನೀಡಿದ್ದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಣೆಯಾಗಿದ್ದ ಇಬ್ಬರು ಮಕ್ಕಳು; ರಿಂಗ್ ಬಾವಿಯಲ್ಲಿ ಶವವಾಗಿ ಪತ್ತೆ

ಈ ದೂರಿನನ್ವಯ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 98ರ ಅನ್ವಯ, ಶಿಕ್ಷಣ ಇಲಾಖೆ ಅಧಿಕಾರಿ ಸಿಂಧು ಬಿ ರೂಪೇಶ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಸದ್ಯ ದೇವೇಂದ್ರ ಅವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲೆಯ ಬೈಂದೂರು ಕಾಲೇಜಿಗೆ ಸ್ಥಳಾಂತರ ಮಾಡಿದ್ದು, “ಅನುಮತಿಯಿಲ್ಲದೆ ಉಡುಪಿ ಜಿಲ್ಲಾ ಕೇಂದ್ರವನ್ನು ಬಿಡುವಂತಿಲ್ಲ” ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...