ಚಿಕ್ಕಮಗಳೂರು | ದೂರವಾಗಿದ್ದ ಪತ್ನಿ ಮೇಲೆ ದ್ವೇಷ; ಮಗಳೂ ಸೇರಿ ಮೂವರನ್ನು ಹತ್ಯೆಗೈದು ದುರುಳ ಆತ್ಮಹತ್ಯೆ

Date:

ಪತಿಯ ಹಿಂಸೆ ತಾಳಲಾರದೆ ಆತನಿಂದ ದೂರುವಾಗಿದ್ದ ಮಹಿಳೆಯ ತಾಯಿ ಮತ್ತು ಮಗಳು ಸೇರಿ ಮೂವರನ್ನು ದುರುಳ ಪತಿಯೊಬ್ಬ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಚಿಕ್ಕಮಗಳೂರು ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ರತ್ನಾಕರ ಎಂಬಾತ ತನ್ನ ಮಗಳು, ಪತ್ನಿಯ ತಾಯಿ (ಅತ್ತೆ) ಹಾಗೂ ನಾದಿನಿಯನ್ನು ಕೊಲೆ ಮಾಡಿ, ತಾನೂ ಗುಂಡು ಹಾಕಿರಿಸಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೃತರನ್ನು ರತ್ನಾಕರನ ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ ಮೌಲ್ಯಾ (7) ಎಂದು ಹೆಸರಿಸಲಾಗಿದೆ. ಬಾಳೆಹೊನ್ನೂರು ಪೊಲೀಸ್ ‌ಠಾಣೆಯಲ್ಲಿ‌‌ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ರತ್ನಾಕರ ಮನೆಯಲ್ಲಿದ್ದವರ ಮೇಲೆ ನಾಡ ಬಂದೂಕಿನಿಂದ ಗುಂಡು ಹಾರಿದ್ದಾನೆ. ದುರ್ಘಟನೆಯಲ್ಲಿ ಜ್ಯೋತಿ, ಸಿಂಧು ಹಾಗೂ ಮೌಲ್ಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ, ಸಿಂಧು ಅವರ ಪತಿಯ ಕಾಲಿಗೂ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ‌ಎಸ್‌ಪಿ ವಿಕ್ರಮ್ ಆಮ್ಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ, ಮೃತ ರತ್ನಾಕರ ಖಾಸಗಿ ಶಾಲಾ ಬಸ್‌ನ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ಕೃತ್ಯ ಎಸಗುವುದಕ್ಕೂ ಮುನ್ನ ಸೆಲ್ಫಿ ವಿಡಿಯೋ ಮಾಡಿಟ್ಟಿದ್ದಾನೆ.

ಈ ವರದಿ ಓದಿದ್ದೀರಾ?: ಜನ ಬಳಕೆ ವಸ್ತು ಮತ್ತು ಸೇವೆಗಳ ದರ ಇಂದಿನಿಂದ ಮತ್ತಷ್ಟು ತುಟ್ಟಿ

ವಿಡಿಯೋದಲ್ಲಿ, “ನನ್ನ ಮಗಳ ಖುಷಿ, ಪ್ರೀತಿ, ಸಂತೋಷದ ಮುಂದೆ ಏನೂ ಇಲ್ಲ. ಶಾಲೆಯಲ್ಲಿ ಮಕ್ಕಳು ನನ್ನ ಮಗಳನ್ನು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ನನ್ನ ಮಗಳು ಬೇಸರದಿಂದ ನನ್ನ ಬಳಿ ಬಂದು ಕೇಳುತ್ತಾಳೆ. ಆದರೆ, ಆಕೆ ನನ್ನನ್ನು ಬಿಟ್ಟು ಹೋಗಿ 2 ವರ್ಷಗಳಾಗಿವೆ” ಎಂದು ಹೇಳಿಕೊಂಡಿದ್ದಾನೆ.

ಮಗಳು ಮೌಲ್ಯಾಳನ್ನು ರತ್ನಾಕರನೇ ಶಾಲೆಗೆ ಸೇರಿಸಿ ಓದಿಸುತ್ತಿದ್ದರು. ಯುಗಾದಿ ಹಬ್ಬವಿದ್ದ ಕಾರಣ ಮಗಳನ್ನು ತನ್ನ ಅತ್ತೆ ಜ್ಯೋತಿ ಅವರ ಮನೆಗೆ ಕಳಿಸಿದ್ದರು. ಮಂಗಳವಾರ ರಾತ್ರಿ ತಾನೂ ಅಲ್ಲಿಗೆ ಹೋಗಿ ಮಗಳು, ಅತ್ತೆ ಹಾಗೂ ನಾದಿನಿಯನ್ನು ಹತ್ಯೆಗೈದಿದ್ದಾರೆ. ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...