ಚಿಕ್ಕಮಗಳೂರು | ಹಿಂದುತ್ವವಾದಿ ಶೋಭಾಯಾತ್ರೆ; ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗಿಲ್ಲ ಪ್ರವೇಶ

Date:

Advertisements

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಸೌಹಾರ್ದತಾಣ ಬಾಬಾಬುಡನ್‌ಗಿರಿ ದರ್ಗಾಯನ್ನು ದತ್ತಪೀಠ ಮಾಡಬೇಕು. ಹಿಂದುಪೀಠವಾಗಿ ಬದಲಿಸಬೇಕೆಂದು ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದು ಪರಿಷತ್‌ ದತ್ತ ಜಯಂತಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳ ವಾರಾಂತ್ಯದಲ್ಲಿ ಚಂದ್ರದ್ರೋಣ ಪರ್ವತದಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಡಿಸೆಂಬರ್ 6ರಿಂದ ಡಿಸೆಂಬರ್ 15ರ ನಡುವಿನ ಎರಡು (ಶನಿವಾರ+ಭಾನುವಾರ) ವಾರಾಂತ್ಯಗಳಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ, ಬಾಬಾಬುಡನ್​ ಗಿರಿ ದರ್ಗಾಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಿ ಜಿಲ್ಲಾಡಳಿತದ ಆದೇಶಿಸಿದೆ.

ಬಾಬಾಬುಡನ್‌ಗಿರಿಯಲ್ಲಿ 25 ವರ್ಷಗಳಿಂದ ವಿವಾದದ ತಾಣವಾಗಿಸಿರುವ ಬಜರಂಗದಳ ಮತ್ತು ವಿಎಚ್‌ಪಿ ಡಿಸೆಂಬರ್ 6ರಿಂದ 14ರವರೆಗೆ 25ನೇ ವರ್ಷದ ದತ್ತಜಯಂತಿ ನಡೆಸುತ್ತಿವೆ. ಡಿಸೆಂಬರ್ 6ರಂದು ದತ್ತಮಾಲಾ ಧಾರಣೆ ನಡೆಯಲಿದ್ದು, ನಂತರದ ದಿನಗಳಲ್ಲಿ ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ ನಡೆಯಲಿದೆ. ಬಾಬಾಬುಡನ್‌ಗಿರಿಯಾಗಿ ಹಿಂದುತ್ವದ ಕೋಮುವಾದಿ ತಾಣವಾಗಿಸಲು ಬಾಬಾಬುಡನ್‌ಗಿರಿಯಲ್ಲಿ ಹೋಮವನ್ನೂ ನಡೆಸಲು ಮುಂದಾಗಿವೆ. ಕೋಮುವಾದಿ ಕಾರ್ಯಕರ್ತರು ಕೋಮುವಾದಿ ಘೋಷಣೆಗಳು, ದ್ವೇಷ ಭಾಷಣಗಳನ್ನು ಮಾಡುವ ಸಾಧ್ಯತೆ ಇದೆ.

Advertisements

ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಜಿಲ್ಲೆಯ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ, ಮುಂದಿನ ಎರಡು ವಾರಗಳ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X