ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು ಹೋಗಿದ್ದಳು. ಈ ವಿಚಾರವಾಗಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ರಾಜಿ ಮಾತುಕತೆ ನಡೆದು ಆತನೊಂದಿಗೆ ಮಾತು ಬಿಟ್ಟಿದ್ದಳು. ಅದೇ ಸಿಟ್ಟಿಗೆ ತೃಪ್ತಿ ಪ್ರಿಯಕರ ಶನಿವಾರ ಮದ್ಯಾಹ್ನ 12.30ರ ಸುಮಾರಿಗೆ ಮಕ್ಕಳ ಎದುರೇ ಮಾರಕಾಸ್ತ್ರದಿಂದ ಇರಿದು ಕೆರೆಗೆ ತಳ್ಳಿ ಹತ್ಯೆ ಮಾಡಿದ್ದಾನೆ.
ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು l ಡಿಸೆಂಬರ್ 7ರಂದು ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಷೆ
ಕೊಲೆಯಾದ ಗೃಹಿಣಿ ತೃಪ್ತಿಗೆ ನಾಲ್ಕು ವರ್ಷ ಹಾಗೂ ಎರಡು ವರ್ಷದ ಇಬ್ಬರು ಮಕ್ಕಳಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
