ಬೀದಿ ನಾಯಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ಜಯಪುರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ನಾಯಿಯ ಮೇಲೆ ಕ್ರೌರ್ಯ ನಡೆಸಿದ್ದು, ಅನುಚಿತವಾಗಿ ವರ್ತಿಸಿರುವ ಘಟನೆ ಸೆರೆಯಾಗಿದೆ, ಬಸ್ ನಿಲ್ದಾಣದಲ್ಲಿ ನಾಯಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ಅಕ್ಟೋಬರ್ 10ರ ಮುಂಜಾನೆ 4ಗಂಟೆಗೆ ವರದಿಯಾಗಿದೆ.
“ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಖಚಿತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಚುಂಚನಕಟ್ಟೆಯಲ್ಲಿ ನ.30ರಿಂದ ಧನುಷ್ಕೋಟಿ ಕಾವೇರಿ ಜಲಪಥೋತ್ಸವ ಆರಂಭ
“ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 292 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(1) (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.
ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ವಿಳಾಸದ ಬಗ್ಗೆ ಪರಿಶೀಲನೆ ನಡೆಸಿದಾಗ ಆತ ಕಟ್ಟಿ ಮನೆ ವಾಸಿ ಶಿವರಾಜ ಎಂಬಾತನೆಂದು ದೃಢಪಟ್ಟಿರುವುದಾಗಿ ಪೊಲೀಸ್ ಕಾನ್ಸ್ಟೇಬಲ್ ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.