ಚಿಕ್ಕಮಗಳೂರು | ಕಾಡಂಚಿನಲ್ಲಿ ವಾಸವಾಗಿದ್ದ ವೃದ್ದೆಯ ಸಂಕಷ್ಟಕ್ಕೆ ಸ್ಪಂದಿಸಿದ ಅಧಿಕಾರಿಗಳು

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸಮೀಪದ ಸಂಸೆ ಗ್ರಾಮ ವ್ಯಾಪ್ತಿಗೆ ಬರುವ ಕಾರ್ಲೆ ಗ್ರಾಮದಲ್ಲಿ ಸಂಕಷ್ಟದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕಾಡಂಚಿನ ಕಾರ್ಲೆ ಗ್ರಾಮದ ನಿವಾಸಿಯಾಗಿರುವ ವೃದ್ಧೆ ಬೆಲ್ಲಮ್ಮನವರ ಮನೆಯ ಮೇಲೆ ಇತ್ತೀಚೆಗೆ ಗಾಳಿ ಮಳೆಯ ಬೃಹತ್ ಗಾತ್ರದ ಮರ ಬಿದ್ದಿತ್ತು. ಮನೆಯ ಮೇಲೆ ಮರ ಬಿದ್ದಿದ್ದರಿಂದ ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿತ್ತು. ಅಲ್ಲದೇ, ಘಟನೆಯ ಸಂದರ್ಭ ಮನೆಯೊಳಗಿದ್ದ ಬೆಲ್ಲಮ್ಮನವರು ಪ್ರಾಣಾಪಾಯದಿಂದ ಪಾರಾಗಿದ್ದರಾದರೂ, ಕಾಲಿಗೆ ಮರದ ಕೊಂಬೆ ತಾಗಿದ್ದರಿಂದ ಗಂಭೀರ ಗಾಯವಾಗಿತ್ತು.

WhatsApp Image 2024 08 22 at 3.29.32 PM 1

ಘಟನೆಯ ಬಳಿಕ ಕಳಸ ಸಾರ್ವಜನಿಕ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಗೆ ಓಡಾಡುತ್ತಿದ್ದರು. ದಿನನಿತ್ಯ ಆಸ್ಪತ್ರೆಗೆ ತೆರಳಬೇಕಾಗಿದ್ದರಿಂದ ಹಣದ ಸಮಸ್ಯೆ ಉಂಟಾಗಿತ್ತು. ಖರ್ಚಿಗೆ ಹಣವಿಲ್ಲದ್ದರಿಂದ ಇವರ ಕುಟುಂಬ, ಆಸ್ಪತ್ರೆಗೆ ತೆರಳುವುದನ್ನು ನಿಲ್ಲಿಸಿದ್ದರು.

Advertisements

ಈ ನಡುವೆ ಕಳೆದ ಒಂದು ವಾರದಿಂದ ಕಾಲು ನೋವು ಜಾಸ್ತಿಯಾಗಿತ್ತು. ಇದನ್ನು ಅರಿತ ಕಳಸ ತಾಲೂಕಿನ ಸಿಟಿಝನ್ ಜರ್ನಲಿಸ್ಟ್ ಆಗಿರುವ ಗಣೇಶ್ ಅವರು ಅಧಿಕಾರಿಗಳ ಗಮನ ಸೆಳೆಯಲು ಸ್ತಳೀಯ ಸುದ್ದಿ ವಾಹಿನಿಯಲ್ಲಿ ಬೆಲ್ಲಮ್ಮನವರ ಸಮಸ್ಯೆಯನ್ನು ಸುದ್ದಿ ಮಾಡಿದ್ದರು. ಈ ನಡುವೆ ಕೆಲವರು ಸರ್ಕಾರದಿಂದ ಪರಿಹಾರ ಸಿಗುವಂತೆ ಮಾಡಲು ಈ ರೀತಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

WhatsApp Image 2024 08 22 at 3.37.38 PM

“ಈ ವಿಚಾರ ಗಮನಕ್ಕೆ ಬಂದ ಕೂಡಲೇ ನೈಜ ಸಂಗತಿ ಅರಿತ ತಾಲೂಕಿನ ಅಧಿಕಾರಿಗಳು, ಬೆಲ್ಲಮ್ಮನವರ ಮನೆಗೆ ಭೇಟಿ ನೀಡಿದ್ದಲ್ಲದೇ, ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ದೊರೆಯುವಂತೆ ಮಾಡಿದ್ದಾರೆ. ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಈ ದಿನ.ಕಾಮ್‌ನ ಸಿಟಿಝನ್ ಜರ್ನಲಿಸ್ಟ್ ಗಣೇಶ್ ಮಾಹಿತಿ ನೀಡಿದ್ದಾರೆ.

ಕಳಸ ನೂತನ ತಹಶೀಲ್ದಾರ್ ಆಗಿರುವ ಕೆ ಎಸ್ ದಯಾನಂದ್ ಮತ್ತು ಉಪ ತಹಶೀಲ್ದಾರ್ ಎಂ ದಯಾವತಿ, ಕಂದಾಯ ಅಧಿಕಾರಿ ಪ್ರಕಾಶ್ ಪ್ರದೀಪ್ ಕುಮಾರ್ ಆಸ್ಪತ್ರೆಗೂ ಕೂಡ ಭೇಟಿ ನೀಡಿದ್ದು, ಬೆಲ್ಲಮ್ಮನವರ ಆರೋಗ್ಯ ವಿಚಾರಿಸಿದ್ದಾರೆ.

WhatsApp Image 2024 08 22 at 3.29.31 PM

“ಮನೆಯ ಮೇಲೆ ಮರ ಬಿದ್ದಿದ್ದರಿಂದ ಹಾನಿಗೊಳಗಾಗಿರುವ ಮೇಲ್ಛಾವಣಿಗೆ ಸರ್ಕಾರದಿಂದ ಪರಿಹಾರ ಧನವನ್ನು ಒದಗಿಸಿ ಕೊಡುವ ಭರವಸೆ ನೀಡಿದ್ದೇವೆ” ಎಂದು ತಹಶೀಲ್ದಾರ್ ದಯಾನಂದ್ ಈ ದಿನ.ಕಾಮ್ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

WhatsApp Image 2024 08 22 at 3.29.32 PM 2
ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X