ಚಿಕ್ಕಮಗಳೂರು | ಮನೆ ಮೇಲೆ ಉರುಳಿದ KSRTC ಬಸ್; 30 ಮಂದಿಗೆ ಗಾಯ

Date:

ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಬಳಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

- Advertisement -

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಬಸ್‌, ಜಯಪುರ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌, ಜಯಪುರದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಚಾಲಕ ವೆಂಕಪ್ಪ ಮತ್ತು ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮನೆಯಲ್ಲಿದ್ದ ಶಾಂತಾ ಅವರಿಗೂ ಗಾಯಗಳಾಗಿವೆ.

ಬಸ್‌ ಬೆಂಗಳೂರು ಡಿಪೋಗೆ ಸೇರಿದ್ದು, ಬಸ್‌ನಲ್ಲಿ 45 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್‌ಅನ್ನು ವೇಗವಾಗಿ ಚಲಾಯಿಸುತ್ತಿದ್ದದ್ದೇ ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ಜಯಪುರ ಪೊಲೀಸ್ ಠಾಣೆಯ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...