ಚಿಕ್ಕಮಗಳೂರು l ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು; ಶಾಸಕಿ ನಯನ ಮೋಟಮ್ಮ

Date:

ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ನಯನ ಮೊಟ್ಟಮ್ಮ ಉದ್ಘಾಟಿಸಿದರು.

- Advertisement -

ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು.  ಬಾಣಂತಿಯರು, ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಅರಿವು ಮೂಡಿಸುತ್ತಿದ್ದರೂ ಜನರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬದಲಾವಣೆ ಆಗದೆ ಇರುವುದು ವಿಷಾದನೀಯ ಎಂದು ಕಾರ್ಯಕ್ರಮದಲ್ಲಿ ಶಾಸಕಿ ನಯನಾ ಮೋಟಮ್ಮ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

‘ಪೌಷ್ಟಿಕ ಕರ್ನಾಟಕ’ ನಿರ್ಮಾಣದ ಸಂಕಲ್ಪದೊಂದಿಗೆ ಪೋಷಣ್ ಅಭಿಯಾನ ಯೋಜನೆ ರೂಪಿಸಲಾಗಿದೆ. ಭಾರತವನ್ನು ಕಾಡುತ್ತಿದ್ದ ಅಪೌಷ್ಟಿಕತೆಯನ್ನು ತೊಡೆದು ಹಾಕಲು 5 ಗುರಿಗಳನ್ನು ಹೊಂದಿದ್ದು, ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರಲ್ಲಿ ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವ ಸಮಸ್ಯೆ ನಿವಾರಿಸಲು ಈ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ ತಿಳಿಸಿದರು. ಅಪೌಷ್ಟಿಕತೆ ನಿವಾರಣೆಗೆ ಜನರ ಸಹಭಾಗಿತ್ವ ಮುಖ್ಯಗಿದ್ದು, ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ಸಮುದಾಯಕ್ಕೆ ತಿಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಸಲಹೆ ನೀಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ

ಈ ವೇಳೆ ಅಂಬಳೆ ಗ್ರಾ.ಪಂ.ಅಧ್ಯಕ್ಷೆ ಲಕ್ಷಮ್ಮ, ಮಲ್ಲಮ್ಮ, ವಿಜಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ.ರೂಪಾಕುಮಾರಿ, ಅಂಬಳೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಎನ್.ಕೆ.ಶೋಭಾ, ಹಿರಿಯ ಮೇಲ್ವಿಚಾರಕಿ ಸಿ.ಎಂ.ಲೀಲಾವತಿ, ಪೋಷಣ್ ಅಭಿಯಾನದ ಯೋಜನಾ ಸಂಯೋಜಕಿ ಕೆ.ದಿವ್ಯಾ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...