ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್ ವಿರುದ್ಧ ಸುಳ್ಳು ಎಫ್ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು
ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.