ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯ ಆರೋಪ: ದಲಿತ ಯುವಕ ಆತ್ಮಹತ್ಯೆ

Date:

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್​ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್​ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...