ಚಿಕ್ಕಮಗಳೂರು l ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಉನ್ನತೀಕರಿಸಲಾಗುತ್ತಿದೆ; ಕೋಟ ಶ್ರೀನಿವಾಸ್ ಪೂಜಾರಿ

Date:

ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಗಳನ್ನು ಮತ್ತಷ್ಟು ಉನ್ನತೀಕರಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಚಿಕ್ಕಮಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತಾಡಿದರು.

- Advertisement -

ಬಿಎಸ್‌ಎನ್‌ಎಲ್ ಬಳಕೆದಾರರ ಕುಂದು ಕೊರತೆಗಳನ್ನು ಆಲಿಸಲು ಎಲ್ಲಾ ತಾಲೂಕಿನಲ್ಲೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿರುವ 217 ಮೊಬೈಲ್ ಟವರ್ ಗಳ ಪೈಕಿ 165 ಮೊಬೈಲ್ ಟವರ್ ಗಳು 4ಜಿ ನೆಟ್ವರ್ಕ್ ಗೆ ಉನ್ನತಿಕರಿಸಲಾಗಿದೆ. 6 ಮೊಬೈಲ್ ಟವರ್ ಗಳ 4ಜಿ ಉನ್ನತಿಕರಣ ಕಾಮಗಾರಿ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಾಗೆಯೇ, ಚಿಕ್ಕಮಗಳೂರು ಜಿಲ್ಲೆಯಲ್ಲಿ 2.56 ಲಕ್ಷ ಸಿಮ್ ಕಾರ್ಡ್ ಗಳು ಬಳಕೆಯಲ್ಲಿವೆ. ಜಿಲ್ಲೆಯಲ್ಲಿರುವ ಮತ್ತಷ್ಟು ಟವ‌ರ್ ಗಳನ್ನು ಉನ್ನತೀಕರಿಸಿ ಅದರ ಬ್ಯಾಟರಿಗಳು, ವಿದ್ಯುತ್ ಸಂಪರ್ಕಗಳನ್ನು ದುರಸ್ತಿಗೊಳಿಸಿದರೆ ಮತ್ತಷ್ಟು ಬಳಕೆದಾರರು ಜಿಲ್ಲೆಯಲ್ಲಿ ಹೆಚ್ಚಾಗುತ್ತಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎರಡು ಗುಂಪಿನ ಘರ್ಷಣೆ: ಪ್ರಕರಣ ದಾಖಲು

ಬಾಕಿ ಇರುವ 46 ಟವರ್ ಗಳಿಗೆ 4ಜಿ ಉಪಕರಣದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಜೊತೆಗೆ 78 ಟವರ್ ಗಳಿಗೆ ಮೊಬೈಲ್ ಬ್ಯಾಟರಿಗಳು ಮಂಜೂರಾಗಿದ್ದು ಇವುಗಳಲ್ಲಿ 51 ಬ್ಯಾಟರಿಗಳನ್ನು ಅಳವಡಿಕೆ ಮಾಡಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 217 ಮೊಬೈಲ್ ಟವರ್ ಗಳನ್ನು ಯಾವುದೇ ಸಮಸ್ಯೆ ಇಲ್ಲದೇ ಕಾರ್ಯಾಚರಿಸುವಂತೆ ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...