ಚಿಕ್ಕಮಗಳೂರು l ಭ್ರಷ್ಟಾಚಾರ ಆರೋಪ: ಶಾಸಕ ಟಿ.ಡಿ ರಾಜೇಗೌಡ, ಪತ್ನಿ, ಮಗನಿಗೆ ಲೋಕಾಯುಕ್ತರಿಂದ ಎಫ್‌ಐಆ‌ರ್ ದಾಖಲು

Date:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ.

- Advertisement -

‘ಟಿ.ಡಿ. ರಾಜೇಗೌಡ ಅವರು ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಸರ್ಕಾರಕ್ಕೆ, ಮತ್ತು ಆದಾಯ ತೆರಿಗೆ ತನಿಖೆ ನಡೆಸಬೇಕು’ ಎಂದು ಕೊಪ್ಪ ನಿವಾಸಿ ದಿನೇಶ್ ಎಚ್.ಕೆ ದೂರಿನಲ್ಲಿ ಮನವಿ ಮಾಡಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೆ.16ರಂದು ಆದೇಶ ನೀಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತ್ತು.’ರಾಜೇಗೌಡ ಅವರ ಕುಟುಂಬ ಸದಸ್ಯರು ತಮ್ಮ ಆದಾಯ ಮೂಲಗಳಿಗೆ ತಾಳೆಯಾಗದಷ್ಟು ಆಸ್ತಿ ಸಂಪಾದಿಸಿದ್ದಾರೆ. ಅವರ ಪಾಲುದಾರಿಕೆ ಸಂಸ್ಥೆಯಾದ ಮೆ.ಶಬಾನಾ ರಂಜಾನ್‌ ವ್ಯವಹಾರಗಳು ಸಾಕ್ಷಿ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.1984ರಲ್ಲಿ ಸ್ಥಾಪಿತವಾದ ಈ ಸಂಸ್ಥೆಯಲ್ಲಿ ಪ್ರಾಥಮಿಕವಾಗಿ ಹಾಜಿ ಔರಂಗಜೇಬ್ ಮತ್ತು ಇತರರು ಪಾಲುದಾರರಾಗಿದ್ದರು. ನಂತರ 1992ರಲ್ಲಿ ಎಸ್.ವಿ. ಗಂಗಯ ಹೆಗೆ, ವಿ.ಜಿ. ಸಿದಾರ್ಥ ಹಾಗೂ ಮಾಳವಿಕಾ ಸಂಸ್ಥೆಗೆ ಪಾಲುದಾರರಾದರು. ಈ ಸಂಸ್ಥೆಯ ಮೂಲಕ ಅವರು 266 ಎಕರೆ ಕಾಫಿ ತೋಟ ಖರೀದಿಸಿದ್ದರು. 1993ರಲ್ಲಿ ಮೂಲ ಪಾಲುದಾರರು ಸಂಸ್ಥೆಯಿಂದ ಹಿಂದೆ ಸರಿದರು. ನಂತರ, ಕಂಪನಿಯು ತೋಟ ಅಡಮಾನವಿಟ್ಟು ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡಿತ್ತು.

2019ರಲ್ಲಿ ಸಿದ್ಧಾರ್ಥ ಹಾಗೂ ಗಂಗಯ್ಯ ಹೆಗ್ಡೆ ಅವರ ಮರಣದ ನಂತರ, ಶಾಸಕ ರಾಜೇಗೌಡರ ಪತ್ನಿ ಡಿ.ಕೆ. ಪುಷ್ಪಾ ಅವರನ್ನು ಶೇ 48ರಷ್ಟು ಪಾಲುದಾರರನ್ನಾಗಿ ಸೇರಿಸಲಾಯಿತು. ಕೆಲವು ತಿಂಗಳ ನಂತರ ಶಾಸಕರ ಪುತ್ರ ರಾಜ್‌ ದೇವ್ ಟಿ.ಆರ್. ಸಹ ಪಾಲುದಾರರಾದರು. ಸ್ಟ್ಯಾಂಡರ್ಡ್ ಚಾರ್ಟಡ್್ರ ಬ್ಯಾಂಕ್‌ಗೆ ₹55.75 ಕೋಟಿ, ಬ್ಯಾಂಕ್‌ ಆಫ್‌ ಬರೋಡಾಗೆ ₹66 ಕೋಟಿ ಹಾಗೂ ಕರ್ನಾಟಕ ಬ್ಯಾಂಕ್‌ಗೆ ₹81.95 ಲಕ್ಷ ಪಾವತಿಸಲಾಗಿದೆ. ಆದರೆ, ಲೋಕಾಯುಕ್ತಕ್ಕೆ ರಾಜೇಗೌಡರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಾರ್ಷಿಕ ಆದಾಯ ಕೇವಲ ₹40 ಲಕ್ಷ ಎಂದು ಘೋಷಿಸಿದ್ದಾರೆ’ ಎಂಬುದು ದೂರುದಾರರ ವಾದ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬಾನು ಮುಷ್ತಾಕ್ : ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ;ಎಂ.ಪಿ ಕುಮಾರಸ್ವಾಮಿ

ಈ ದಾಖಲೆಗಳನ್ನು ಲೋಕಾಯುಕ್ತರಿಗೆ ಸಲ್ಲಿಸಿದ್ದ ದಿನೇಶ್ ಅವರು, ತನಿಖೆ ನಡೆಸುವಂತೆ ಈ ಹಿಂದೆಯೇ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆರೋಪಗಳು ನಿರಾಧಾರ ಎಂದು 2023ರಲ್ಲಿ ವರದಿ ನೀಡಿದ್ದರು. ದೂರುದಾರರು ಇದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ಎಫ್‌ಐಆ‌ರ್ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...