ಚಿಕ್ಕಮಗಳೂರು l ವೈದ್ಯರ ನಿರ್ಲಕ್ಷ್ಯ, ಕಂದಮ್ಮ ಸಾವು

Date:

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ ಮೀನಾ ಮತ್ತು ನವೀನ್ ದಂಪತಿಗಳ ಮಗ ಮಾನ್ವಿತ್ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...
Screenshot 2024 11 27 14 22 25 12 7352322957d4404136654ef4adb64504

ಈದಿನ.ಕಾಮ್‌ ಜೊತೆ ಮಾತನಾಡಿದ ಮಗುವಿನ ತಾಯಿ ಮೀನಾ, “ಇತ್ತೀಚೆಗೆ ಮಗು ಮಾನ್ವಿತ್ ಆರೋಗ್ಯ ಹದಗೆಟ್ಟಿತ್ತು. ನವೆಂಬರ್ 1ರಂದು ತೀವ್ರ ಜ್ವರ ಕಾಣಿಸಿಕೊಂಡಿತ್ತು. ಮಗುವನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾಕ್ಟರ್ ಮಂಜುನಾಥ್ ಸರಿಯಾದ ಚಿಕಿತ್ಸೆ ನೀಡುತ್ತಿರಲಿಲ್ಲ. ಚಿಕಿತ್ಸೆ ನೀಡಬೇಕೆಂದರೆ 1,000 ರೂ. ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು” ಎಂದು ಆರೋಪಿಸಿದ್ದಾರೆ.

Screenshot 2024 11 27 14 38 11 21 7352322957d4404136654ef4adb64504

“ಮಂಗಳವಾರ, ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದೆವು. ಆಸ್ಪತ್ರೆಯ ವೈದ್ಯ ಮಂಜುನಾಥ್, ‘ಊಟದ ಸಮಯಕ್ಕೆ ಬಂದಿದ್ದೀರಾ. ಯಾವಾಗ ಬರಬೇಕೆಂಬುದು ಗೊತ್ತಾಗಲ್ವ. ಊಟ ಮುಗಿಸಿ ಬಂದು ನೋಡುತ್ತೇನೆ. ಅಷ್ಟೊತ್ತಿಗೆ ಸತ್ತುಹೋಗುವುದಿಲ್ಲ’ ಎಂದು ಉಡಾಫೆಯ ಮಾತಿನೊಂದಿಗೆ ನಿಂದಿಸಿದರು” ಎಂದು ಮೀನಾ ವಿವರಿಸಿದ್ದಾರೆ.

ವೈದ್ಯರು ಊಟ ಮುಗಿಸಿ ಬರುವ ವೇಳೆಗೆ ಮಗು ಮೃತಪಟ್ಟಿತ್ತು. ಆಗ ಬಂದ ವೈದ್ಯರು ಮತ್ತು ಸಿಬ್ಬಂದಿಗಳು ಸಾವನಪ್ಪಿರುವ ಮಗುವಿಗೆ ಚಿಕಿತ್ಸೆ ಕೊಡುವ ನಾಟಕ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ದೊರನಾಳು ಗ್ರಾಮಸ್ಥರು ಆಸ್ಪತ್ರೆಯ ಮುಂದೆ ಮಗುವಿನ ಮೃತದೇಹ ಪ್ರತಿಭಟನೆ ನಡೆಸಿದ್ದಾರೆ.ಪೋಷಕರ ಪ್ರತಿಭಟನೆಯಲ್ಲಿ ಮಾದಿಗ ಸಂಘ, ದಲಿತ ಸಂಘ, ಅಹಿಂದ ಸಂಘಟನೆಗಳು ಭಾಗವಹಿಸಿದ್ದು, ಮಗುವಿನ ಸವಿಗೆ ನ್ಯಾಯ ಕೊಡಿಸಬೇಕು. ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Screenshot 2024 11 27 14 35 40 07 7352322957d4404136654ef4adb64504

ಮಾಹಿತಿ ತಿಳಿದ ಕೂಡಲೇ ಡಿಎಚ್ಓ, ಡಿವೈಎಸ್‌ಪಿ ಹಾಗೂ ತಾಲೂಕು ಆಡಳಿತಾಧಿಕಾರಿ ಕಾಂತರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪೋಷಕರೊಂದಿಗೆ ಮಾತನಾಡಿದ್ದಾರೆ. ವೈದ್ಯರ ವಿರುದ್ಧ ತರೀಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪ್ರಾಣ ಬಿಟ್ಟೇವು, ಭೂಮಿ ಬಿಡಲ್ಲ: ದಲಿತ ನಿವಾಸಿಗಳ ಅಳಲು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...