ಚಿಕ್ಕಮಗಳೂರು l ಗಮಕ ಸಾಹಿತ್ಯ ಸಮ್ಮೇಳನ ಕಡೂರಿನಲ್ಲಿ ಆಯೋಜಿಸಲು ಚಿಂತನೆ

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಾಯಿತು.

- Advertisement -

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕಡೂರು ತಾಲ್ಲೂಕಿನ ಲಕ್ಷ್ಮೀಶಕವಿಯ ಜನ್ಮಸ್ಥಳ ದೇವನೂರು ಅಥವಾ ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಜಿಲ್ಲಾ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸಲು ಯೋಚಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ರಾಜ್ಯಮಟ್ಟದ ಗಮಕ ಸಾಹಿತ್ಯ ಸಮ್ಮೇಳನವಾಗುವ ಸಾಧ್ಯತೆಯಿದೆ. ಜನವರಿ ಮೊದಲ ವಾರ ಶೃಂಗೇರಿಯಲ್ಲಿ ರಾಜ್ಯಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿದೆ. ಕಡೂರು ತಾಲ್ಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, 1ರಿಂದ 10ನೇ ತರಗತಿ ಮಕ್ಕಳು ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಸಮ್ಮೇಳನದ ಅಧ್ಯಕ್ಷರನ್ನು ಇದೇ ವಯೋಮಾನದ ಮಕ್ಕಳಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 2.50 ಲಕ್ಷ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

24 ವರ್ಷಗಳ ಹಿಂದೆ ಜಿಲ್ಲಾ ಲೇಖಕರ ಕೈಪಿಡಿ, ಸಾಹಿತಿಗಳ ಮಾಹಿತಿ ಕೋಶವನ್ನು ಹೊರತರಲಾಗಿತ್ತು. ಅಂತಹದ್ದೇ ಕೈಪಿಡಿಯನ್ನು ಪ್ರಸ್ತುತ ಹೊರತರಲು ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಕೊಪ್ಪ, ಶೃಂಗೇರಿಯಲ್ಲಿ ಕನ್ನಡ ಭವನಗಳಿವೆ. ತರೀಕೆರೆ ಹಾಗೂ ಕಳಸದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ದೊರಕಿದೆ. ಜಿಲ್ಲೆಯಲ್ಲಿ ಒಟ್ಟು 188 ದತ್ತಿಗಳಿದ್ದು, ಎರಡು ಮೂರು ದತ್ತಿಗಳನ್ನು ಒಗ್ಗೂಡಿಸಿ ದತ್ತಿ ಉಪನ್ಯಾಸ ಮಾಡಲಾಗಿದೆ ಎನ್ನಲಾಗಿದೆ. ಈ ವೇಳೆ ಜಿಲ್ಲಾ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಮಂಚೆಗೌಡ,ನರಸಿಂಹರಾಜಪುರ ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್, ಕಣಿವೆ ನಾಗಚಂದ್ರ ಪ್ರತಿಷ್ಠಾ‍ನದ ಕಣಿವೆ ವಿನಯ್, ಸಾಹಿತ್ಯ ಪರಿಷತ್‌ನ ಎಸ್.ಎಸ್.ಸಂತೋಷ್ ಕುಮಾರ್, ವಿವಿಧ ತಾಲ್ಲೂಕುಗಳ ಸಾಹಿತ್ಯ ಪರಿಷತ್ ಮತ್ತು ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...