ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

Date:

Advertisements

ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ.

ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 10ರಂದು, ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು  ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳತನ ನಡೆಸಿದ್ದ ಆರೋಪಿ ಕಾರ್ಪೆಂಟರ್ ವಿರೂಪಾಕ್ಷ ಕೆ.ಎನ್ ಬಂಧಿಸಿ ವಿಚಾರಣೆ ನಡೆಸಿದಾಗ ಚಿನ್ನಾಭರಣ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಈ ಹಿಂದೆಯೂ ಈತನ ವಿರುದ್ದ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಮನೆ ಕಳ್ಳತನ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Advertisements

ಈ ಕುರಿತು ಪ್ರಕರಣದ ತನಿಖೆಗೆ ಎಸ್ಪಿ ಡಾ. ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಎಸ್‌ ಪಿ ಜಯಕುಮಾರ್, ತರೀಕೆರೆ ಉಪವಿಭಾಗದ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಅವರ ಮೇಲ್ವಿಚಾರಣೆಯಲ್ಲಿ, ಕಡೂರು ವೃತ್ತ ನಿರೀಕ್ಷಕ ರಫೀಕ್ ಎಂ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು..ಪಿಎಸ್‌ಐ ಸಜಿತ್ ಕುಮಾರ್ ಹಾಗೂ ಠಾಣೆಯ ಸಿಬ್ಬಂದಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಆರೋಪಿಯಿಂದ ಕಳವು ಮಾಡಿದ್ದ 195.9 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಭೇದಿಸಿದ ಪೊಲೀಸರ ತಂಡಕ್ಕೆ ಎಸ್ಪಿ ವಿಕ್ರಮ್ ಅಮಟೆಯವರು ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X