ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
21-05-2025 ರಂದು ರೆಡ್ ಅಲರ್ಟ್ ಹಾಗೂ 22-05-2025 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು, ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆ ಆಗುವವರೆಗೆ ಸಾರ್ವಜನಿಕರಿಗೆ ಜಾಗೃತದಿಂದ ಇರಲು ತಿಳಿಸಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬೀದಿ ನಾಯಿಗಳ ದಾಳಿ: ಜಿಂಕೆ ಸಾವು
ಮಳೆ ಜಾಸ್ತಿ ಆಗಿರುವ ಕಾರಣ ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ಜೊತೆಗೆ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.