ಅಕ್ರಮವಾಗಿ ಕಲ್ಲು ಬಂಡೆ ಸ್ಫೋಟಗೊಳಿಸಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯ ಹಲಸುಮನೆ ಬಳಿ ನಡೆದಿದೆ.
ಹಲಸುಮನೆ ಗ್ರಾಮದ ಸಿದ್ದರಹಟ್ಟಿಯ ಕಲ್ಲು ಬಂಡೆಯ ಮೇಲಿರುವ ಇತಿಹಾಸ ಪ್ರಸಿದ್ಧ ಪುರಾತನ ವೀರಭದ್ರೇಶ್ವರ ದೇವಾಲಯ ಬಳಿ ಅಕ್ರಮವಾಗಿ ಕಲ್ಲು ಬಂಡೆ ಸ್ಫೋಟದಿಂದಾಗಿ ದೇವಾಲಯ ಕುಸಿಯುವ ಭೀತಿ ಎದುರಾಗಿತ್ತು. ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಳ್ಳತನ ಪ್ರಕರಣ: 3 ವರ್ಷ ಜೈಲು, 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಗಮನಕ್ಕೆ ತಂದ ಬಳಿಕ ಅಕ್ರಮವಾಗಿ ಕಲ್ಲು ಬಂಡೆ ಸ್ಫೋಟ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಸ್ಫೋಟಕಗಳ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಹಾಗೆಯೇ, ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.