ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಸುಮಾರು 300 ಕಿಲೋ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಮ್ಮೆ ಇಂತಹ ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ಅಥವಾ ಮಾರಾಟ ಪತ್ತೆಯಾದರೆ, ಕೇವಲ ದಂಡವಷ್ಟೇ ಅಲ್ಲದೆ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ
ಈ ವೇಳೆ ನಗರಸಭೆಯ ಪೌರಾಯುಕ್ತ ಬಿ.ಸಿ ಬಸವರಾಜ್ ಹಾಗೂ ಅಧ್ಯಕ್ಷೆ ಶೀಲಾ ದಿನೇಶ್ ಅವರ ನೇತೃತ್ವದಲ್ಲಿ ಪರಿಸರ ಅಭಿಯಂತರ ತೇಜಸ್ವಿನಿ ಹಾಗೂ ತಂಡ ಸೇರಿ ಕಾರ್ಯಾಚರಣೆ ನಡೆಸಿ, ಹತ್ತಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.