ಚಿಕ್ಕಮಗಳೂರು l ಲೀಡ್ ಬ್ಯಾಂಕ್; ಅರ್ಹ ಫಲಾನುಭವಿಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ; ಮಹೇಶ್

Date:

ಚಿಕ್ಕಮಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಗ್ರಾಹಕರು, ಬ್ಯಾಂಕ್‌ಗಳು ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಹೇಗೆ ಲೀಡ್ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ ಎಂದು ಕ್ಲಬ್‌ ವತಿಯಿಂದ ತಿಂಗಳ ಅತಿಥಿ ಸಂವಾದ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಯಿತು.

- Advertisement -

ಯೂನಿಯನ್ ಬ್ಯಾಂಕ್ ಆರ್‌ಬಿಐನ ಪ್ರತಿನಿಧಿಯಾಗಿ ಲೀಡ್ ಬ್ಯಾಂಕ್‌ನ ಜವಾಬ್ದಾರಿಯನ್ನು ಅತ್ಯಂತ ಮುತುವರ್ಜಿಯಿಂದ ನಿರ್ವಹಿಸುತ್ತಿದೆ. ಲೀಡ್ ಬ್ಯಾಂಕ್ ಕೇಂದ್ರ ಮತ್ತು ರಾಜ್ಯ ಸರಕಾರಗಳ ಬ್ಯಾಂಕ್ ಸಂಬಂಧಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸುವುದರೊಂದಿಗೆ ಬ್ಯಾಂಕಿಂಗ್‌ ಕ್ಷೇತ್ರವನ್ನು ಗ್ರಾಮೀಣ ಜನರಿಗೆ ತಲುಪುವ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆನ್‌ಲೈನ್ ವಂಚನೆಗಳಂತಹ ಪ್ರಕರಣಗಳಿಗೆ ತಡವಾದರೂ ಪತ್ತೆ ಮಾಡಿ ಕಡಿವಾಣ ಹಾಕಲಾಗುತ್ತದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಜೆಎಂಎಫ್‌ಸಿ ನ್ಯಾಯಾಲಯದ ಒಪ್ಪಿಗೆಯ ಆದೇಶದೊಂದಿಗೆ ಸರ್ಫೇಸಿ ಕಾಯ್ದೆಯಡಿಯಲ್ಲಿ ಸಾಲ ಮರುಪಾವತಿ ಮಾಡದೆ ಸುಸ್ಥಿದಾರರಾದ ಬೆಳೆಗಾರರ ಆಸ್ತಿ, ಜಮೀನುಗಳನ್ನು ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿಕೊಂಡು ಹರಾಜು ಹಾಕಲು ಅವಕಾಶ ಇದೆ. ಸಾಲ ಸುಸ್ಥಿಯಾಗಿದ್ದಲ್ಲಿ ಬೆಳೆಗಾರರಿಗೆ 60 ದಿನಗಳ ಕಾಲ ಸಾಲ ಮರುಪಾವತಿಗೆ ಕಾಲಾವಕಾಶವನ್ನು ಬ್ಯಾಂಕ್‌ ಗಳು ನೀಡುತ್ತವೆ. ನಂತರ ನೋಟಿಸ್ ನೀಡಿ ಮತ್ತೆ 7 ದಿನಗಳವರೆಗೆ ಸಾಲ ಮರುಪಾವತಿಗೆ ಕಾಲಾವಕಾಶ ನೀಡಲಾಗುತ್ತದೆ. ಹಾಗೆಯೇ, ಜಿಲ್ಲೆಯಲ್ಲಿ ಪಿಎಂ ಸ್ವ-ನಿಧಿ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ, ಪಿಎಂಎಫ್‌ಎಂಎ ಯೋಜನೆಗಳು ಸೇರಿದಂತೆ ರಾಜ್ಯ ಸರಕಾರದ ಬ್ಯಾಂಕ್ ಸಂಬಂಧಿ ಯೋಜನೆಗಳನ್ನು  ಲೀಡ್‌ ಬ್ಯಾಂಕ್ ಮೂಲಕ ಅರ್ಹರಿಗೆ ತಲುಪುತ್ತಿದೆ. ಹಾಗೆಯೇ, ರಾಜಕಾರಣಿ, ಪ್ರಭಾವಿ ವ್ಯಕ್ತಿಗಳಿಗೆ ಮಣಿಯದೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಹೆಣ್ಣು ಮಗುವಿಗೆ ಜನ್ಮ: ಪೋಕ್ಸೋ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಪ್ರೆಸ್‌ಕ್ಲಬ್ ಅಧ್ಯಕ್ಷ ಸಿ.ಡಿ ಚಂದ್ರೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಗೋಪಿ, ಸಹಕಾರ್ಯದರ್ಶಿ ರುದ್ರಯ್ಯ ಹಾಗೂ ಸದಸ್ಯರು, ಪ್ರತ್ರಿಕಾ ಬಳಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...