ಚಿಕ್ಕಮಗಳೂರು l ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ

Date:

Advertisements

ಮಲೆನಾಡ ಭಾಗದ ಹಿರಿಯ ನಾಯಕರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ.

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ತಂದೆಯವರಾದ ಬೇಗಾನೆ ರಾಮಯ್ಯ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ ಸುಮಾರು 1:45ಕ್ಕೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Screenshot 2025 04 24 20 44 25 21 40deb401b9ffe8e1df2f1cc5ba480b12

ಮಲೆನಾಡ ಹಿರಿಯ ನಾಯಕರು ಆಗಿದ್ದ, ಅವರು 1978ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬೇಗಾನೆ ರಾಮಯ್ಯ ಅಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಗ್ರಾಮೀಣಾಭಿವೃದಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮಯ್ಯ, 1972 ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದರು.

Advertisements

ಶೃಂಗೇರಿ ಕ್ಷೇತ್ರದ ಶಾಸಕರಾಗಿ ಗ್ರಾಮೀಣ ಅಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ ರಾಮಯ್ಯ ಶೃಂಗೇರಿ ಕ್ಷೇತ್ರ ಕಂಡ ಅಪರೂಪದ ರಾಜಕಾರಣಿ. ಕೆ. ಎನ್ ವೀರಪ್ಪಗೌಡರ ಎದುರಾಳಿಯಾಗಿ ಪ್ರಚಂಡ ಮತಗಳಿಂದ ಗೆದ್ದ ರಾಮಯ್ಯ ಗುಂಡೂರಾವ್ ಸಂಪುಟದಲ್ಲಿ ಸಚಿವರಾಗಿದ್ದರು. ಮಲೆನಾಡು ಭಾಗದಲ್ಲಿ ಬೋರವೆಲ್ ರಾಮಯ್ಯ ಎಂದೇ ಜನಪ್ರಿಯರಾದರು. ಇವರ ಮಗಳು ಆರತಿ ಕೃಷ್ಣ ಅನಿವಾಸಿ ಭಾರತೀಯ ಸಂಘದ ಉಪಾಧ್ಯಕ್ಷರಾಗಿ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚೀಟಿ ವ್ಯವಹಾರ: ಯುವಕನ ಕೊಲೆಯಲ್ಲಿ ಅಂತ್ಯ

ಬೇಗಾನೆ ರಾಮಯ್ಯನವರ ಸಂಸ್ಕಾರವನ್ನು ದಿನಾಂಕ:25.04.2025 ರಂದು ಸಂಜೆ: 03:00 ಗಂಟೆಗೆ ಸೀತಾ ಫಾರಂ, ಹೊಸಹಳ್ಳಿ ಮಂಡಗದ್ದೆ ರಸ್ತೆ, ಶಿವಮೊಗ್ಗ ಜಿಲ್ಲೆಯಲ್ಲಿ ನೆರವೇರಿಸಲು ಕುಟುಂಬದವರು ನಿಶ್ಚಯಸಿರುತ್ತಾರೆ. ಸಾರ್ವಜನಿಕರಿಗೆ ಅಂತಿಮ ದರ್ಶನವನ್ನು ಪಡೆಯಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X