ಚಿಕ್ಕಮಗಳೂರು l ನಕ್ಸಲರು ಭೂಗತರಾಗದೇ, ಸಮಾಜದ ಮುಖ್ಯವಾಹಿನಿಗೆ ಬರಬೇಕು; ಎಸ್ಪ್ ವಿಕ್ರಮ್ ಅಮಟೆ ಮನವಿ

Date:

ರಾಜ್ಯ ಸರ್ಕಾರದಿಂದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪೊಲೀಸ್‌ ಇಲಾಖೆ ಮೊದಲ ಆದ್ಯತೆ ನೀಡಲಿದೆ, ನಕ್ಸಲರು ಭೂಗತರಾಗದೇ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಕರೆ ನೀಡಿದರು.

- Advertisement -

ನಕ್ಸಲರ ಶರಣಾಗತಿ ಸಂಬಂಧ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ಹಿಂದೆಯೂ ಕೆಲವು ನಕ್ಸಲರು ಶರಣಾಗತರಾಗಿದ್ದಾರೆ.ಎಂದ ಅವರು ಕರ್ನಾಟಕ ಸೇರಿ ಹೊರ ರಾಜ್ಯದ ನಕ್ಸಲರಿಗೂ ಶರಣಾಗತಿಗೆ ಅವಕಾಶ ನೀಡಲಾಗಿದೆ, ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಮೂರು ವರ್ಗಗಳನ್ನು ಮಾಡಲಾಗಿದೆ. ಕರ್ನಾಟಕದವರಾಗಿದ್ದು, ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರೆ 7ಲಕ್ಷ ಪರಿಹಾರಧನವನ್ನು ಮೂರು ಹಂತದಲ್ಲಿ ನೀಡಲಾಗುವುದು. ಹೊರ ರಾಜ್ಯದವರಾಗಿದ್ದು, ಸಕ್ರಿಯವಾಗಿದ್ದರೆ ಅವರಿಗೆ 5ಲಕ್ಷ ಹಣವನ್ನು ಮೂರು ಹಂತಗಳಲ್ಲಿ ನೀಡಲಾಗುವುದು ಎಂದು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

ನಕ್ಸಲ್‌ ಬೆಂಬಲಿತರ ಶರಣಾಗತಿಗೆ 2ಲಕ್ಷ ರೂ. ಘೋಷಣೆ ಮಾಡಲಾಗಿದ್ದು, ಮೂರು ಹಂತದಲ್ಲಿ ಪರಿಹಾರ ಹಣವನ್ನು ನೀಡಲಾಗುವುದು ಎಂದರು. ಶರಣಾಗತಿಯಾಗುವ ನಕ್ಸಲರು ತಮ್ಮನ್ನು ನೇರವಾಗಿ ಸಂಪರ್ಕ ಮಾಡಬಹುದು. ಅವರಿಗೆ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ನಕ್ಸಲರನ್ನು ಶರಣಾಗತಿ ಮಾಡಿಸುವವರಿಗೂ ಪೊಲೀಸ್‌ ಇಲಾಖೆ ಬೆಂಬಲ ನೀಡುತ್ತದೆ. ಮಾಜಿ ನಕ್ಸಲರ ಸಮಸ್ಯೆ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಭೆ ಮಾಡುತ್ತೇವೆ. ಶರಣಾಗತರಾಗಿರುವ ಮಾಜಿ ನಕ್ಸಲರು ತಮ್ಮ ಸಮಸ್ಯೆಗಳನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಎಸ್ಪಿ ವಿಕ್ರಮ್ ಅಮಟೆ ಸುದ್ದಿವಾಹಿನಿ ಮೂಲಕ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...