ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ, ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾದ್ಯಕ್ಷ ಶಿವಮೂರ್ತಿ ಮಾತನಾಡಿ, ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ₹31000 ಕನಿಷ್ಠ ವೇತನ ನೀಡುವುದು, ಬೀದರ್ ಜಿಲ್ಲಾ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ಕುರಿತು ಸಹಕಾರ ಸಂಘವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಪಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಸಿಬ್ಬಂದಿಗಳ ಸಂಖ್ಯೆ ಕಡಿತ ಆದೇಶವನ್ನು ವಾಪಸ್ ಪಡೆಯುವುದು, ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈ ಕೂಡಲೇ ಸರ್ಕಾರ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, ನ್ಯಾಯಯುತ ಬೇಡಿಕೆಗಳ ಮನವಿಯನ್ನು ಸರ್ಕಾರಕ್ಕೆ ಕಳಿಸಿ ಕೊಡಲಾಗುವುದು ಹಾಗೂ ಜನವರಿ 26ರ ನಂತರ ಸಭೆ ಮಾಡಲು ದಿನಾಂಕ ನಿಗದಿಪಡಿಸಲಾಗುವುದು. ನಿಯಮಾನುಸಾರ ಹೊರಗುತ್ತಿಗೆ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!
ಈ ವೇಳೆ ರಂಗಸ್ವಾಮಿ, ಲೋಕೇಶ್, ಕುಮಾರಸ್ವಾಮಿ, ರೇಖಾ, ವಿಶಾಲ ಬಿ ಎಂ, ಪವಿತ್ರ, ರಮೇಶ್, ಜಿಲ್ಲೆಯ ಎಲ್ಲಾ ತಾಲೂಕುಗಳ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಹಾಗೂ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆಗಳ ಅತಿಥಿ, ಹೊರಗುತ್ತಿಗೆ ಶಿಕ್ಷಕರು ಇನ್ನಿತರರು ಇದ್ದರು.
