ಚಿಕ್ಕಮಗಳೂರು l ಪೊಲೀಸರಿಂದ ಹೋಂ ಸ್ಟೇ, ರೆಸಾರ್ಟ್ಸ್, ಲಾಡ್ಜ್ ಮಾಲೀಕರಿಗೆ ಮಾರ್ಗಸೂಚಿ 

Date:

ಜಿಲ್ಲಾ ಮಟ್ಟದ ಹೋಂ ಸ್ಟೇ, ರೆಸಾರ್ಟ್ಸ್ ಹಾಗೂ ಲಾಡ್ಜ್ಸ್ ಮಾಲೀಕರು/ವ್ಯವಸ್ಥಾಪಕರುಗಳ ಸಭೆ ನಡೆಸಿ ಸೂಕ್ತ ತಿಳುವಳಿಕೆ, ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಿಲ್ಲಾ ಪೊಲೀಸ್ ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಭೆ ನಡೆಸಲಾಯಿತು.

- Advertisement -

ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ತಾಣಗಳಲ್ಲಿನ ಹೋಂ ಸ್ಟೇಗಳು ರೆಸಾರ್ಟ್ & ಲಾಡ್ಜ್ಸ್ ಗಳಲ್ಲಿ ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಯ ಸಂಬಂಧ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳುವುದು. ಹೊರ ವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿಯನ್ನು ಪಡೆಯಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
Screenshot 2025 03 13 18 56 46 13 7352322957d4404136654ef4adb64504

ಪೊಲೀಸರ ಅನುಮತಿ ಇಲ್ಲದೆ, ನಿರ್ಜನ ಪ್ರದೇಶ ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡುಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಹೋಂ ಸ್ಟೇ, ರೆಸಾರ್ಟ್ ಅಥವಾ ಲಾಡ್ಜ್ ಮಾಲೀಕರುಗಳೇ ಜವಾಬ್ದಾರರಾಗಿರುತ್ತಾರೆ ಹಾಗೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಎಸ್ಪಿ ಡಾ.ವಿಕ್ರಂ ಅಮಟೆ ತಿಳಿಸಿದರು.

 ರೆಸಾರ್ಟ್ ಗಳು / ಹೋಮ್ ಸ್ಟೇಗಳನ್ನು ನಿರ್ವಹಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು:

1) ಹೋಂ ಸ್ಟೇಗಳು / ರೆಸಾರ್ಟ್ ಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು.  2) ಡ್ರಗ್ಸ್ ಮತ್ತು ಮಾದಕ ವಸ್ತುಗಳ ಬಳಕೆ,ಮಾರಾಟ, ಸಂಗ್ರಹಣೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದನ್ನು ಎಲ್ಲಾ ಅತಿಥಿಗಳಿಗೆ ಗೋಚರಿಸುವಂತೆ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಬೇಕು.   3) ವಿದೇಶಿ ಪ್ರಜೆಗಳ ಆಗಮನದ ಬಗ್ಗೆ ತಕ್ಷಣ ಮಾಹಿತಿ ನೀಡಬೇಕು ಮತ್ತು ಫಾರ್ಮ್-ಸಿ ಅನ್ನು ತಕ್ಷಣ ಸ್ಥಳೀಯ ಪೊಲೀಸ್ ಠಾಣೆ ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಕಳುಹಿಸಬೇಕು.  4) ಆವರಣದ ಮುಖ್ಯ ದ್ವಾರ, ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಿಸಿಟಿವಿ ದೃಶ್ಯಾವಳಿಗಳನ್ನು ಕನಿಷ್ಠ ಮೂರು ತಿಂಗಳವರೆಗೆ ಸಂಗ್ರಹಿಸಿಡಬೇಕು. 5) ವಿದೇಶಿ ಪ್ರಜೆಗಳು ಸೇರಿದಂತೆ ಎಲ್ಲಾ ಅತಿಥಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಹಲವು ಸೂಚನೆಗಳೊಂದಿಗೆ ಜಿಲ್ಲಾ ಪೊಲೀಸರಿಂದ ಮಾಹಿತಿ ತಿಳಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ

ಈ  ವೇಳೆ ಶೈಲೇಂದ್ರ ಪೊಲೀಸ್ ಉಪಾದೀಕ್ಷಕರು ಚಿಕ್ಕಮಗಳೂರು ಉಪ ವಿಭಾಗ, ಕೆ ಸಿ ಆನಂದ್ ಡಿಎಫ್ಓ (ಸಾಮಾಜಿಕ ಅರಣ್ಯ), ರಮೇಶ್ ಬಾಬು ಡಿಎಫ್ಓ ಚಿಕ್ಕಮಗಳೂರು, ನಂದೀಶ್ ಡಿಎಫ್ಓ ಕೊಪ್ಪವಿಭಾಗ, ಶಿವರಾತ್ರಿಶ್ವರ ಸ್ವಾಮಿ ಎಸಿಎಫ್ ಭದ್ರಾ ವೈಲ್ಡ್ ಲೈಫ್, ಉಮರ್ ಬಾಷಾ ಎಸಿಎಫ್ ತರೀಕೆರೆ, ಎ ಎಸ್ ಮೋಹನ್ ಎಸಿಎಫ್ ಚಿಕ್ಕಮಗಳೂರು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ನಾಗರಾಜ್ ಚಿಟ್ಟ ಸೇರಿದಂತೆ ಜಿಲ್ಲೆಯಲ್ಲಿನ ಹೋಂ ಸ್ಟೇ ರೆಸಾರ್ಟ್ ಲಾಡ್ಜ್ಸ್ ಮಾಲೀಕರು /ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...