ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯಕ್ಕೆ ಬಲಿಯಾದ ದಲಿತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ:  ಕರ್ನಾಟಕ ಜನಶಕ್ತಿಯಿಂದ ಕಳಸ ಚಲೋ ಎಚ್ಚರಿಕೆ

Date:

Advertisements

ಕುದುರೆಮುಖ ಪೊಲೀಸರ ದೌರ್ಜನ್ಯದಿಂದ ಮನನೊಂದು ದಲಿತ ಯುವಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜನಶಕ್ತಿ ಜಿಲ್ಲಾ ಸಮಿತಿಯು, ತಪ್ಪಿತಸ್ಥ ಅಧಿಕಾರಿಗಳು ಮತ್ತು ಗೂಂಡಾಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಳಸದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರವನ್ನು ಎಚ್ಚರಿಸುವುದಾಗಿ ಸಮಿತಿ ತಿಳಿಸಿದೆ.

ಜನಶಕ್ತಿ ಜಿಲ್ಲಾ ಸಮಿತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ, ನಾಗೇಶ್ ಅವರ ಮೇಲೆ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಹಾಗೂ ಸ್ಥಳೀಯ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ನಂತರ, ಕುದುರೆಮುಖ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಅವರು ಸುಳ್ಳು ಪ್ರಕರಣಗಳನ್ನು ದಾಖಲಿಸಿ, ನಾಗೇಶ್ ಅವರ ಆಟೋವನ್ನು ಸೀಜ್ ಮಾಡಿ ಕಿರುಕುಳ ನೀಡಿದ್ದಾರೆ. ಪೊಲೀಸರ ಈ ನಡೆ ನಾಗೇಶ್ ಅವರ ಆತ್ಮಸ್ಥೈರ್ಯವನ್ನು ಕುಂದಿಸಿ, ಕೊನೆಗೆ ಅವರು ಆತ್ಮಹತ್ಯೆಯಂತಹ ತೀವ್ರ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ ಎಂದು ಸಮಿತಿ ಆರೋಪಿಸಿದೆ.

ಜನಶಕ್ತಿ ಸಮಿತಿಯ ಪ್ರಮುಖ ಬೇಡಿಕೆಗಳು ಈ ಕೆಳಗಿನಂತಿವೆ: 1.ನಾಗೇಶ್ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿದ್ದೇಶ್ ಮತ್ತು ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಇಬ್ಬರನ್ನೂ ಸೇವೆಯಿಂದ ವಜಾಗೊಳಿಸಿ, ಅವರ ಮೇಲೆ ಕೊಲೆ ಪ್ರಕರಣಗಳನ್ನು ದಾಖಲಿಸಬೇಕು. 2.ಸ್ಥಳೀಯ ಗೂಂಡಾ ರಕ್ಷಿತ್ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು. 3.ನಾಗೇಶ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಿ, ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. 4.ಪೊಲೀಸ್ ದೌರ್ಜನ್ಯದಿಂದಾಗಿ ಬೀದಿಪಾಲಾಗಿರುವ ನಾಗೇಶ್ ಕುಟುಂಬದ ಸಂಪೂರ್ಣ ನಿರ್ವಹಣಾ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ವಹಿಸಿಕೊಳ್ಳಬೇಕು.

Advertisements

ಈ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ, ರಾಜ್ಯದ ಎಲ್ಲ ಪ್ರಗತಿಪರ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಳಸ ಚಲೋ ಪ್ರತಿಭಟನೆ ನಡೆಸುವುದಾಗಿ ಜನಶಕ್ತಿ ಜಿಲ್ಲಾ ಸಮಿತಿ ಘೋಷಿಸಿದೆ. ಸಮಾಜದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸುವ ಉದ್ದೇಶದಿಂದ ಈ ಹೋರಾಟ ಅನಿವಾರ್ಯವಾಗಿದೆ ಎಂದು ಸಮಿತಿ ಹೇಳಿದೆ.

ಪ್ರಕರಣದ ಹಿನ್ನೆಲೆ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿತ್ತು. ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್ ವಿರುದ್ಧ ಸುಳ್ಳು ಎಫ್ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಈದಿನ.ಕಾಮ್ ಗೆ ಮಾಹಿತಿ ತಿಳಿಸಿದ್ದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯ ಆರೋಪ: ದಲಿತ ಯುವಕ ಆತ್ಮಹತ್ಯೆ

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X