ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ.
ಎರಡನೇ ದಿನದ ಕಾರ್ಯಾಚರಣೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಎರಡನೇ ದಿನದ ಕಾರ್ಯಾಚರಣೆಯ ಸ್ಥಳಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡ ಅವರು ಭೇಟಿ ನೀಡಿ ಕಾರ್ಯಾಚರಣೆ ಮುಗಿಯುವ ತನಕ ಸ್ಥಳದಲ್ಲೇ ಖುದ್ದಾಗಿ ಅಧಿಕಾರಿಗಳೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಇದ್ದು, ಈ ಒಂದು ಯಶಸ್ವಿ ಕಾರ್ಯಾಚರಣೆಗೆ ಕಾರಣರಾಗಿದ್ದಾರೆಂದು ಗ್ರಾಮಸ್ಥರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ
ಶೃಂಗೇರಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಕಾಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಮಾನ್ಯ ಶಾಸಕರ ಮನವಿಗೆ ಮತ್ತು ಮಲೆನಾಡಿನ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಕರ್ನಾಟಕ ಸರ್ಕಾರದ ಅರಣ್ಯ ಮಂತ್ರಿಗಳಾದ ಈಶ್ವರ್ ಖಂಡ್ರೆಯರಿಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.