ಚಿಕ್ಕಮಗಳೂರು l ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಕಿನೊಳಗೆ ಪಡಿತರ ಹಂಚಿಕೆಯಾಗಬೇಕು; ಕರಾಸಪವಿಸ ಆಗ್ರಹ

Date:

ಆಹಾರ ಭದ್ರತೆ ಯೋಜನೆಯಡಿ ಕೇಂದ್ರ ಸರ್ಕಾರ 5 ಕೆ.ಜಿ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು ಅಂಗಡಿ ಮಾಲೀಕರಿಗೆ ಪ್ರತಿ ತಿಂಗಳು 15ರಂದು ವಿತರಿಸುವುದು ವಿಳಂಬವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘ ಬೆಂಗಳೂರು ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ಮಂಗಳವಾರ ನಡೆಸಲಾಯಿತು.

- Advertisement -

ಪಡಿತರ ದಾಸ್ತಾನು ವಿವಿಧ ಕಾರಣಗಳಿಂದ ನ್ಯಾಯಬೆಲೆ ಈಚೀಟಿದಾರರಿಗೆ ಪ್ರತಿ ತಿಂಗಳು 20ನೇ ತಾರೀಖಿನ ನಂತರ ಪಡಿತರ ವಿತರಣೆ ಮಾಡಲಾಗುತ್ತಿರುವುದರಿಂದ ಎತ್ತುವಳಿಗೂ ಸಹ ವಿಳಂಬವಾಗಿ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಆದ್ದರಿಂದ ತಕ್ಷಣ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಹಂಚಿಕೆಯನ್ನು ವಿಳಂಬವಿಲ್ಲದೆ ನೀಡಬೇಕು ಎಂದು ಕರಾಸಪವಿಸ ಮುಖಂಡ ಟಿ ಕೃಷ್ಣಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾಲೀಕರಿಗೆ ಬರಬೇಕಾದ ಕಮೀಷನ್ ಹಣವನ್ನು ಪ್ರತೀ ತಿಂಗಳಲ್ಲೇ ಪಾವತಿಗೆ ಕ್ರಮವಹಿಸಬೇಕು ಮತ್ತು ಸುಮಾರು 7 ವರ್ಷಗಳಿಂದ ಇ.ಕೆ.ವೈ.ಸಿ. ಮಾಡಿರುವ ಹಣ ಪಾವತಿಸಿಲ್ಲ, ಈ ಕೂಡಲೇ ಇ.ಕೆ.ವೈ.ಸಿ. ಹಣವನ್ನು ಬಿಡುಗಡೆ ಮಾಡಬೇಕು. ಹಾಗೆಯೇ, ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಿಗೆ ಬಿಲ್ಲಿಂಗ್ ಮಾಡಿದ 24 ಗಂಟೆಗಳ ನಂತರ ಬಿಲ್ ಆಪ್‌ಡೇಟ್ ಆಗುತ್ತದೆ. ಇಂತಹ ತಾಂತ್ರಿಕ ಸಮಸ್ಯೆಗಳು ಬಗೆಹರಿಸಿ ಬಿಲ್ ಹಾಕಿದ ಕೂಡಲೇ ವಿತರಣೆ ಅವಕಾಶ ಮಾಡಿಕೊಡಬೇಕು ಎಂದು ಕರಾಸಪವಿಸ ಮುಖಂಡ ಟಿ ಕೃಷ್ಣಪ್ಪ ತಿಳಿಸಿದರು.

ಮಾರ್ಚ್‌ – ಜುಲೈವರೆಗೆ ಕೆಲವು ಜಿಲ್ಲೆಗಳಲ್ಲಿ ಅನ್ನಭಾಗ್ಯದ 5 ಕೆ.ಜಿ ಕಮೀಷನ್ ಹಣ ಬಿಡುಗಡೆ ಮಾಡಿದ್ದಾರೆ. ಎನ್.ಎಫ್.ಎಸ್.ಐ. ಕಮೀಷನ್ ಹಣವನ್ನು ಏಪ್ರಿಲ್ ತಿಂಗಳು ಒಂದು ತಿಂಗಳು ಮಾತ್ರ ಬಿಡುಗಡೆಯಾಗಿದ್ದು ಮೇ-ಜೂನ್-ಜುಲೈ ಕಮೀಷನ್ ಹಣ ಬಿಡುಗಡೆಯಾಗಿಲ್ಲ, ತಕ್ಷಣ ಬಿಡುಗಡೆಗೊಳಿಸಬೇಕೆಂದು ಕರಾಸಪವಿಸ ವತಿಯಿಂದ ಒತ್ತಾಯಿಸಿದರು. ಈ ವೇಳೆ ಚನ್ನಕೇಶವಗೌಡ, ಡಿ ತಾಯಣ್ಣ ಹಾಗೂ ಕರಾಸಪವಿಸ ಸಂಘದವರು ಭಾಗವಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...