ಚಿಕ್ಕಮಗಳೂರು l ಸಾವಿತ್ರಿಬಾಯಿಫುಲೆ ಮೌಡ್ಯತೆ, ಕಂದಚಾರಗಳ ವಿರುದ್ದ ಹೋರಾಡಿದ ಧೀಮಂತ ಮಹಿಳೆ; ಸಿ. ಟಿ ರವಿ

Date:

ಸಾವಿತ್ರಿ ಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ (ರಿ.) ನವದೆಹಲಿ , ಕೇಂದ್ರ ಕಛೇರಿ  ಧಾರವಾಡ, ಕರ್ನಾಟಕ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ ಜಿಲ್ಲೆ ಮತ್ತು ತಾಲೂಕು ಘಟಕ ಚಿಕ್ಕಮಗಳೂರು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

- Advertisement -

ಭಾರತ ಪರಂಪರೆಯಲ್ಲಿ ಮಾತೆ ಸಾವಿತ್ರಿ ಬಾಯಿ ಪುಲೆ ಒಬ್ಬ ಉತ್ತಮ ಸಮಾಜ ಸೇವಕಿ. ಅಂದಿನ ದಿನಗಳಲ್ಲಿದ್ದ ಮೌಡ್ಯತೆ ಕಂದಚಾರಗಳ ವಿರುದ್ದ ಹೋರಾಡಿದ ಧೀಮಂತ ಮಹಿಳೆಯಾಗಿದ್ದಾರೆ. ಶತಮಾನಗಳ ಮಧ್ಯೆಯಲ್ಲಿ ತೂರಿಕೊಂಡ ಕಂದಚಾರಗಳಿಂದಾಗಿ ಹೆಣ್ಣುಮಕ್ಕಳು ವಿದ್ಯೆ ಕಲಿಯಬಾರದೆಂದು ಕೆಲವು ಮೌಡ್ಯರು ಸಮಾಜದಲ್ಲಿ ಹೇರಿದ್ದರು. ಇದನ್ನು ಮೀರಿ ಅಂದಿನ ದಿನಗಳಲ್ಲಿ ಪತಿ ಜ್ಯೊತಿ ಬಾ ಪುಲೆ ಯವರ ಸಹಕಾರದೊಂದಿಗೆ 150 ವರ್ಷಗಳ ಹಿಂದೆ ಮಹಿಳೆಯರಿಗೆ ವಿದ್ಯಾದಾನ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ,  ಆಧುನಿಕ ಶಿಕ್ಷಣದ ತಾಯಿಯಾಗಿ  ಸಾವಿತ್ರಿಬಾಯಿ ಇದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನೂ ಓದಿದ್ದೀರಾ?ಹಾಸನ | ಕ್ಷುಲ್ಲಕ ಕಾರಣ; ಯುವಕನಿಗೆ ಚಾಕು ಇರಿತ

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರುದ್ರಪ್ಪರವರು ಶಿಕ್ಷಕರು ಸಂಸ್ಕಾರಯುತವಾದ ಗುಣ ಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ಕಲಿಸಬೇಕು. ಆ ಮೂಲಕ ಒಳ್ಳೆಯ ಮಾರ್ಗ ತೋರಿಸಬೇಕೆಂದು ಹೇಳಿದರು. ಈ ವೇಳೆ ಕಾರ್ಯಕ್ರಮದಲ್ಲಿ  ಉಪನ್ಯಾಸಕರಾದ ರೇಖಾ ನಾಗರಾಜ್ ಹಾಗೂ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷರಾದ ಜ್ಯೋತಿ,ಅಧ್ಯಕ್ಷತೆ ವಹಿಸಿದ್ದು, ಉಪನ್ಯಾಸಕರಾದ ಬಾಗಿ ಬಾಯಿ, ಇಸಿಒ ಅಸ್ಫ ಅಕ್ತರ, ಸುಮನಾ, ಲಕ್ಷ್ಮಣ್, ಕ.ರಾ.ಸ.ನೌಕರರ ಸಂಘದ ನಿರ್ದೇಶಕರಗಳು, ಕಾರ್ಯಾಧ್ಯಕ್ಷರು,  ಜಿಲ್ಲಾ ಮತ್ತು ತಾಲೂಕು ಎಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಮತ್ತು ತಾಲೂಕು ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...