ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನು ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ
ಈ ಕುರಿತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದ್ದಾರೆ.
