ಅಪ್ರಾಪ್ತೆ ಜೊತೆ ಲೈಂಗಿಕ ದೌರ್ಜನ್ಯ ನಡೆಸಿ, ಬಾಲಕಿಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ.
ಬಂಧಿತ ಆರೋಪಿ ಗುರುಪ್ರಸಾದ್ ಎನ್ನಲಾಗಿದೆ. ನರಸಿಂಹರಾಜಪುರ ತಾಲೂಕಿನ ಕಾಡಂಚಿನ ಕುಗ್ರಾಮ ನಿವಾಸಿ ಬಾಲಕಿ, ಭಾನುವಾರ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಮನೆಯವರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದ ನಂತರ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ಬೆಳಕಿಗೆ ಬಂದಿದೆ.
ಈ ವಿಚಾರವಾಗಿ ಬಾಲಕಿ ಬಳಿ ಕೇಳಿದಾಗ “ನನ್ನನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ” ಎಂದು ಹೇಳಿ ನನ್ನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಹೇಳಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ l ಎರಡು ತಿಂಗಳಲ್ಲಿ 21 ಸಾವು: ಒಂದೇ ದಿನ ಸರಣಿ ಸಾವು: ನಾಲ್ವರಿಗೆ ಹೃದಯಘಾತ
ಈ ಕುರಿತು ಬಾಲಕಿ ಪೋಷಕರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.