ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

Date:

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು ಪಡೆದಿತ್ತು. ಅದೇ ರೀತಿಯಲ್ಲಿ ನಕ್ಸಲರು ಶರಣಾದಾಗ ಪುನರ್ವಸತಿ ಪ್ಯಾಕೇಜ್‌ ಜೊತೆಗೆ ಮಲೆನಾಡು ಅಭಿವೃದ್ಧಿಯಾಗಬೇಕೆಂಬ ಸಿಎಂ ಬಳ್ಳಿ ನಕ್ಸಲರು ಬೇಡಿಕೆ ಇಟ್ಟಿದ್ದರು. ಆ ಬೇಡಿಕೆಯನ್ನು ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆಂದು ₹ 7 ಕೋಟಿ 12 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ.

- Advertisement -

2002ರಿಂದ ಸುಮಾರು 20 ವರ್ಷಗಳ ಕಾಲ ಕಾಫಿನಾಡಿನ ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ ಭಾಗಗಳಲ್ಲಿ ನಕ್ಸಲ್ ಚಟುವಟಿಕೆಗಳು ಉತ್ತುಂಗದಲ್ಲಿದ್ದವು. ಎ.ಎನ್‌.ಎಫ್. ಸಿಬ್ಬಂದಿ ಗನ್‌ ಹಿಡಿದು ಕಾಡಲ್ಲಿ ಹುಡುಕಾಡುವುದು, ಶಸ್ತ್ರಸಜ್ಜಿತ ಪೊಲೀಸರ ಕ್ಯಾಂಪ್‌ಗಳು ಸರ್ವೇ ಸಾಮಾನ್ಯವಾಗಿದ್ದವು. ನಕ್ಸಲರ ಹೋರಾಟದ ಉದ್ದೇಶ ಮಲೆನಾಡಿನ ಕುಗ್ರಾಮಗಳ ಅಭಿವೃದ್ಧಿಗೆ ಆಗಿದ್ದರೂ, ಆ ಸಮಯದಲ್ಲಿ ಅದನ್ನು ಅರಿಯದ ಸರ್ಕಾರಗಳು ಈಗ ನಕ್ಸಲರು ಶರಣಾದ ನಂತರ ಅಭಿವೃದ್ಧಿಗೆ ಮುಂದಾಗಿದೆ. ಈ ಹಣವನ್ನು ಕಾಡಂಚಿನ ಕುಗ್ರಾಮಗಳ ರಸ್ತೆ, ನೀರು, ವಿದ್ಯುತ್, ಕಾಲುಸಂಕ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಒದಗಿಸಲು ಬಳಸಲಾಗುವುದು ಅಂತ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸ್ವಾತಂತ್ರ್ಯ ಬಂದು 75 ವರ್ಷ ಆದರೂ ಮಲೆನಾಡಿನ ಎಷ್ಟೋ ಗ್ರಾಮಗಳು ಮೂಲಭೂತ ಸೌಕರ್ಯವನ್ನು ನೋಡುವ ಸಮಯ ಈಗ ಬಂದಿದೆ. ಆದರೆ, ನಕ್ಸಲರು ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದ್ದಾಗಲೇ ಸರ್ಕಾರಗಳು ಕಾಡಂಚಿನ ಕುಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿದ್ದರೆ, ನಕ್ಸಲರು ಹಾಗೂ ಪೊಲೀಸರ ನಡುವಿನ ಸಂಘರ್ಷಕ್ಕೆ ಬ್ರೇಕ್ ಹಾಕಬಹುದಾಗಿತ್ತು. ನಕ್ಸಲರನ್ನು ಹುಡುಕಲು ಮತ್ತು ಸೆರೆ ಹಿಡಿಯಲು ಕೋಟ್ಯಾಂತರ ರೂಪಾಯಿ ವ್ಯಯ ಮಾಡಿದ್ದ ಸರ್ಕಾರಗಳು, ಅವರು ಮುಖ್ಯವಾಹಿನಿಗೆ ಬರುವಾಗಲೂ ಲಕ್ಷಾಂತರ ರೂಪಾಯಿ ಪ್ಯಾಕೇಜ್ ನೀಡಿದೆ. ಈಗ ಬಿಡುಗಡೆಯಾಗಿರುವ ₹ 7 ಕೋಟಿ 12 ಲಕ್ಷ ಹಣದಲ್ಲಿ ವಿವರವಾದ ಯೋಜನಾ ವರದಿ ತಯಾರಿಸಿ ಅಭಿವೃದ್ಧಿಗೆ ಮುಂದಾಗಿದೆ. 

ಇದನ್ನೂ ಓದಿದ್ದೀರಾ?ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

10-20 ವರ್ಷಗಳ ಹಿಂದೆಯೇ ಸರ್ಕಾರಗಳು ಮಾಡಿದ್ದರೇ ಬಹುಶಃ ಮಲೆನಾಡಿನಲ್ಲಿ ನಕ್ಸಲಿಜಂ ಹುಟ್ಟುತ್ತಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಒಟ್ಟಾರೆಯಾಗಿ, ಮಲೆನಾಡಿನ ನಕ್ಸಲ್ ಪೀಡಿತ ಕುಗ್ರಾಮಗಳು ಹಾಗೂ ಕಾಡಂಚಿನ ಗ್ರಾಮಗಳಿಗೆ ಅಭಿವೃದ್ಧಿ ಭಾಗ್ಯ ಸಿಕ್ಕಿದ್ದು, 75 ವರ್ಷಗಳ ಬಳಿಕ ಅನೇಕ ಗ್ರಾಮಗಳು ರಸ್ತೆ, ಕಾಲುಸಂಕ, ಶುದ್ಧ ನೀರು, ಚರಂಡಿ, ಕರೆಂಟ್ ವ್ಯವಸ್ಥೆ ಹಾಗೂ ಇನ್ನಿತರ ಅಭಿವೃದ್ಧಿಗಳು ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...