ಮಲೆನಾಡಲ್ಲಿ ಗಾಳಿ-ಮಳೆ ಹೆಚ್ಚಾಗಿದ್ದು, ಗಾಳಿ -ಮಳೆಯಿಂದ ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ ಹೊರಗೆ ಬಂದಿದ್ದಾರೆ. ಮನೆಯಲ್ಲಿರುವ ವಸ್ತುಗಳು ಸಂಪೂರ್ಣ ನಾಶವಾಗಿದೆ. ಮನೆಯಲ್ಲಿದ್ದ ಪ್ರೇಮ ಎಂಬ ಮಹಿಳೆಯ ಮೇಲೆ ಮರದ ಟೊಂಗೆ ಬಿದ್ದು ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ವಾಟರ್ ಹೀಟರ್ ಸ್ಪರ್ಶ: ವ್ಯಕ್ತಿ ಸಾವು
ಈ ಘಟನೆ ಕುರಿತು ಸ್ಥಳಕ್ಕೆ ತಾಲ್ಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.