ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ ವತಿಯಿಂದ ಮನೆಯಂಗಳದಿ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿದರು.

- Advertisement -

ಸಾಹಿತಿ ಮನಸುಳಿ ಮೋಹನ್‌ ಮಾತನಾಡಿ ” ಸಮಾಜ ದಲ್ಲಿನ ಅಂಕು-ಡೊಂಕು, ಮೌಡ್ಯ, ಜಾತಿ-ಧರ್ಮಗಳ ನಡುವಿನ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ. ಪ್ರಪಂಚದ ಯಾವ ಭಾಗದಲ್ಲಾದರೂ ಆಯಾ ಭಾಷೆ ಹಾಗೂ ಭಾವನೆಗಳ ಮೂಲಕ ಸಮಾಜದ ಸಾಮರಸ್ಯ, ಸೌಹಾರ್ಧತೆಯಿಂದ ದಾರ್ಶನಿಕರು ಮತ್ತು ಶರಣರು ಕಂಡಂತಹ ಸಮ ಸಮಾಜದ ನಿರ್ಮಾಣ ಮಾಡುವಲ್ಲಿ ಸಾಹಿತ್ಯ ಕ್ಷೇತ್ರದಿಂದ ಸೇವೆ ಸಲ್ಲಿಸಬೇಕು. ಸಾಹಿತ್ಯ ಅಕ್ಷರಸ್ಥ ಮತ್ತು ಅನಕ್ಷರಸ್ಥರಲ್ಲಿ ಯಾರಾದರೊಬ್ಬರ ಮೇಲೆ ಪ್ರಭಾವ ಬೀರಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

” ಸಾಹಿತ್ಯ ಎನ್ನುವುದು ಒಂದು ನ್ಯಾಯಯುತ ಬದುಕು. ಅದು ಓದು-ಬರಹದ ಮೂಲಕ ಆಗುವಂತಿಲ್ಲ. ಮಾನವ ಆದರ್ಶವಾಗಿ ಬದುಕುವುದೇ ಒಂದು ಬೃಹತ್ ಗ್ರಂಥ. ಸಾಕಷ್ಟು ದಾರ್ಶನಿಕರ ಜೀವನ ಸಾಧನೆಯೇ ಒಂದು ಸಾಹಿತ್ಯ. ಇದನ್ನು ಕನ್ನಡ ಸಾಹಿತ್ಯ ಪರಿಷತ್ತು ಶ್ರವಣ ಸಂಜೆ ಕಾರ್ಯಕ್ರಮದಿಂದ ಸಮಾಜದಲ್ಲಿ ಮರೆಮಾಚಲ್ಪಟ್ಟ ಎಷ್ಟೋ ಜನರನ್ನು ಹೊರತರಬಹುದಾದ ಪರಿಕಲ್ಪನೆಯಾಗಿದೆ. ವ್ಯವಸ್ಥೆಯಲ್ಲಿ ಭ್ರಮೆಗಳನ್ನು ತೊಡೆದುಹಾಕಿ ವಾಸ್ತವ ನೆಲೆಗಟ್ಟಿಗೆ ತರಲು ರಾಜಕೀಯ, ಸಾಮಾಜಿಕ, ಶೈಕ್ಷಣಿಕದಂತಹ ಪ್ರತಿಯೊಂದು ಕ್ಷೇತ್ರಕ್ಕೂ ಸಾಹಿತ್ಯದ ಮಾರ್ಗದರ್ಶನ ಅಗತ್ಯವಿದೆ” ಎಂದು ಸಾಹಿತಿ ಮನಸುಳಿ ಮೋಹನ್‌ ತಿಳಿಸಿದರು.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ಕನ್ನಡ ಸಾಹಿತ್ಯದ ಚಟುವಟಿಕೆಗಳು ನಂದಾದೀಪದಂತೆ ಬೆಳಗಿ ಉತ್ತಮ ಸಮಾಜ ನಿರ್ಮಾಣ ಮಾಡಲಿ ಎಂದು ಮನಸ್ಸು ಪ್ರತಿಷ್ಠಾನದ ಅಧ್ಯಕ್ಷ ಟಿ.ಆ‌ರ್. ಶ್ರೀಧರ್ ಮಾಹಿತಿ ನೀಡಿದರು. ಈ ವೇಳೆ ಕಸಾಪ ಜಿಲ್ಲಾ ಮಹಿಳಾ ಪ್ರಧಾನ ಸಂಚಾಲಕಿ ಎಂ.ಎಸ್. ವಿಶಾಲಾಕ್ಷಮ್ಮ, ಕಸಾಪ ತಾಲ್ಲೂಕು ಅಧ್ಯಕ್ಷ ನವೀನ್ ಪೆನ್ನಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಇಮ್ರಾನ್ ಅಹ್ಮದ್ ಬೇಗ್, ಶಿಕ್ಷಕ ಟಿ. ನಾಗರಾಜ, ಬಿ.ಎಸ್. ಭಗವಾನ್, ಶಿವಣ್ಣ, ರವಿ ದಳವಾಯಿ, ಪತ್ರಕರ್ತ ಹೆದ್ದೂರು ಶಿವಣ್ಣ, ಬಿ.ಎಂ. ಮಲ್ಲಿಕಾರ್ಜುನ, ಶಿಕ್ಷಕ ರಂಗನಾಥ್, ಕಡೂರು ಪ್ರಶಾಂತ್, ಸಿದ್ರಾಮಯ್ಯ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...