ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕೆಲವು ತಾಲೂಕಿನ ಶಿಶುಪಾಲನ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ಬುಧವಾರ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಮಲೆನಾಡಿನಲ್ಲಿ ಎರಡು ದಿನದಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿಶುಪಾಲನ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಉಳಿದ ಚಿಕ್ಕಮಗಳೂರು, ತರೀಕೆರೆ, ಕಡೂರು, ಅಜ್ಜಂಪುರ ತಾಲೂಕುಗಳಲ್ಲಿ ಮಳೆಯ ಕಡಿಮೆ ಇರುವುದರಿಂದ ಶಿಶುಪಾಲನ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.