ಚಿಕ್ಕಮಗಳೂರು | ಗ್ರಾಮ ಸಹಾಯಕರ ನೇಮಕಾತಿ ನಿಯಮ ಉಲ್ಲಂಘನೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗ್ರಾಮ ಸಹಾಯಕರ ನೇಮಕಾತಿಯಲ್ಲಿ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ದೌರ್ಜನ್ಯ ಜಿಲ್ಲಾ ಮಟ್ಟದ ಜಾಗೃತ ಸಮಿತಿಯಿಂದ ಶುಕ್ರವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು.

- Advertisement -
Screenshot 2025 12 20 11 14 07 04 99c04817c0de5652397fc8b56c3b3817

ಕಡೂರು ತಾಲೂಕು ಕಚೇರಿ ವ್ಯಾಪ್ತಿಯಲ್ಲಿ ಸುಮಾರು 64 ಗ್ರಾಮ ಸಹಾಯಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಬಿಸಿಎಂ, ಮಡಿವಾಳ, ಲಿಂಗಾಯುತ ಹೀಗೆ ಎಲ್ಲಸೇರಿ 64 ಮಂದಿ ಇದ್ದಾರೆ. 1978ರ ಸರಕಾರದ ಸುತ್ತೋಲೆಯ ಪ್ರಕಾರ ರಾಜ್ಯದ ಯಾವುದೇ ಮೂಲೆಗಳಲ್ಲಿ ಗ್ರಾಮ ಸಹಾಯಕರನ್ನು ನೇಮಕ ಮಾಡುವಾಗ ಸರಕಾರದ ನಿಬಂಧನೆಯಂತೆ ಈ ಹಿಂದೆ ಗ್ರಾಮದ ಕೆಲಸವನ್ನು ಮಾಡುತ್ತಿರುವ ತೋಟಿಗಳು ನೀರುಗಂಟಿ, ತಳಹಾರಿಗಳು, ವಾಲಿಕಾರಿಗಳು, ಮಹರ್‌ರು ಬಾರ್‌ಕರ್ಸ, ತಳವಾರರು, ಸೋತಸ್ಯಾಂಡೀಸ್, ಕುಳುವಾಡಿಗಳು ಊರುಗನಿಗಳ ಮತ್ತು ಕುಟುಂಬದ ಸದಸ್ಯರನ್ನು ನೇಮಿಸಿಕೊಳ್ಳಬೇಕು ಎಂಬ ಸರಕಾರದ ಆದೇಶ ಸ್ಪಷ್ಟವಾಗಿದೆ. ಆದರೆ, ಈ ನಿಯಮವನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ ಎಂದು ಮಾಜಿ ಸದಸ್ಯ  ಪ್ರಶಾಂತ್ ಕಡೂರಹಳ್ಳಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...
Screenshot 2025 12 20 11 37 02 19 99c04817c0de5652397fc8b56c3b3817

ಕಡೂರು ಕಚೇರಿಯಲ್ಲಿ ಖಾಲಿಯಿದ್ದ ಒಂದು ಗ್ರಾಮ ಸಹಾಯಕರ ಹುದ್ದೆಯನ್ನು ಎಸ್ಸಿ, ಎಸ್ಟಿ ಅಭ್ಯರ್ಥಿ ಅರ್ಜಿ ಹಾಕಿದ್ದರೂ ಕೂಡ ಮೇಲ್ವರ್ಗದವರಿಗೆ ನೀಡಲಾಗಿದೆ. ಹೀಗಾಗಿ ನೇಮಕಾತಿ ಮಾಡಿದ ಅಧಿಕಾರಿ ವಿರುದ್ಧ ದಲಿತ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿಯಲ್ಲಿ ಕೇಸು ದಾಖಲು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ದೌರ್ಜನ್ಯ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಅಗ್ರಹಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: ಐಸಿರಿ ಫೌಂಡೇಶನ್‌; ಡಿ.23ರಂದು’ರೈತ ದೇವೋಭವ,’ಐಸಿರಿ ಫಿಟ್ನೆಸ್ ಚೆಕ್ ಕಾರ್ಯಕ್ರಮ

ಈ ಸಂದರ್ಭದಲ್ಲಿ ದಲಿತ ದೌರ್ಜನ್ಯ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಮಾಜಿ ಸದಸ್ಯ ಪ್ರಶಾಂತ್ ಕಡೂರುಹಳ್ಳಿ, ರೇವಣ್ಣ, ಪ್ರಕಾಶ್, ರವಿಕುಮಾರ್ ಹಾಗೂ ಇತರರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...