ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು ಹೋಬಳಿಯ ಜಾವಳಿ ಗ್ರಾಮದ ಪಾಂಡಿಮನೆ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಕಾಡುಕೋಣ ದಾಳಿಯಿಂದ ಗಂಭೀರ ಗೊಂಡ ವ್ಯಕ್ತಿ ರಾಜು (60), ತಮ್ಮ ಮನೆಯ ಹತ್ತಿರ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ್ದು, ಬಲಬಾಗದ ತೊಡೆಗೆ ತಿವಿದ ಪರಿಣಾಮ ಮಾಂಸ ಭಾಗ ಹೊರ ಬಂದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಬಣಕಲ್ ಕೃಷ್ಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ
ಮಲೆನಾಡಿನ ಭಾಗದಲ್ಲಿ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ನಡೆಯುತ್ತಿದ್ದು, ನಿರಂತರ ಕಾಡುಕೋಣ ದಾಳಿಯಿಂದಾಗಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕುರಿತು ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ