ಕಾಡಾನೆಗಳು ಪಟ್ಟಣದಲ್ಲಿ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹೇಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಆಂಬ್ಯುಲೆನ್ಸ್ ನಲ್ಲಿ ಧ್ವನಿವರ್ಧಕಗಳ ಮೂಲಕ ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಿದ್ದಾರೆ. ತಾಲೂಕಿನಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.
ಇದನ್ನ ಓದಿದ್ದೀರಾ?ಚಿಕ್ಕಮಗಳೂರು l ಅಂಬೇಡ್ಕರ್ ವಸತಿ ಶಾಲೆ ಊಟ ಸೇವಿಸಿ ಹತ್ತು ವಿದ್ಯಾರ್ಥಿಗಳು ಅಸ್ವಸ್ಥ
ಇದೀಗ ಕಾಡಾನೆಗಳು ಪಟ್ಟಣದ ಸಮೀಪಕ್ಕೆ ಆಗಮಿಸಿರುವುದು ವಾಹನ ಸವಾರರಲ್ಲೂ ಆತಂಕ ಹೆಚ್ಚಾಗಿದೆ.