ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ ಕಾರ್ಮಿಕರು ಸಾವನಪ್ಪಿದ್ದರು. ಬಾಳೆಹೊನ್ನೂರ್ ಬಂದ್ ನಂತರ ಎರಡು ಆನೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ ಖಂಡಿತ್ತು. ಆದರೇ, ಇತ್ತೀಚಿನ ದಿನಗಳಲ್ಲಿ ಆನೆಗಳ ಕಾಟ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ವ್ಯಾಪ್ತಿಯಲ್ಲಿ ಗ್ರಾಮ, ಕುಗ್ರಾಮ, ನಗರ, ಪಟ್ಟಣಗಳಲ್ಲಿ ಮನುಷ್ಯರಂತೆ ಆನೆಗಳು ಓಡಾಡುತ್ತ ಇದ್ದಾವೆ. ಜಯಪುರ, ಅಗಲಗಂಡಿ, ಹೇರೂರು, ಸಿಗೋಡು, ಹಾಗೆಯೇ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ಕಾಣಿಸಿಕೊಳ್ಳುತ್ತಿದೆ. ಮುಂದಿನ ದಿನದಲ್ಲಿ ಬಾಳೆಹೊನ್ನೂರು ಕಡೆ ಪ್ರಯಾಣ ಬೆಳೆಸುತ್ತವೆಂದು ಸಾರ್ವಜನಿಕರು ಈದಿನ.ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು
ಕಾಡಾನೆಯಿಂದ ಜನರು ಬೇಸತ್ತಿದ್ದಾರೆ. ಆದಷ್ಟು ಬೇಗ ಅರಣ್ಯ ಇಲಾಖೆಯಿಂದ ಸೂಕ್ತ ಕ್ರಮ ವಹಿಸಬೇಕು. ಕಾಡಾನೆಗಳನ್ನು ಹಿಡಿದು ಬೇರೆ ಕಾಡಿಗೆ ಬಿಡಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.