ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಕಾಣಿಸಿಕೊಳ್ಳುತ್ತಿದೆ. ಹಾಗೆಯೇ, ರೈತರು ಬೆಳೆದಿರುವಂತಹ ಬೆಳೆಗಳನ್ನು ಕಾಡಾನೆ ನಾಶ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದಲ್ಲಿ ನಡೆದಿದೆ.

ಅರಣ್ಯ ಇಲಾಖೆಗೆ ಗಮನಕ್ಕೆ ತಂದರು ಏನು ಪ್ರಯೋಜನವಾಗುತ್ತಿಲ್ಲ. ಕಾಡಾನೆ ದಾಳಿಯಿಂದ ಕಳೆದ ತಿಂಗಳಲ್ಲಿ ಸುಮಾರು ಸಾವು ಸಂಭವಿಸಿದೆ, ಮುಂದಿನ ದಿನಗಳಲ್ಲಿ ಅಪಾಯ ತಪ್ಪಿದ್ದಲ್ಲ, ಅರಣ್ಯ ಇಲಾಖೆ ಬೇಜವಾಬ್ದಾರಿತನ ತೋರಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ
ಕಾಡಾನೆ ಹಾವಳಿಯಿಂದ ಸುತ್ತಮುತ್ತಲಿನ ಜನರಿಗೆ ಹಾಗೂ ದಿನನಿತ್ಯ ಚಲಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆದಷ್ಟು ಬೇಗ ಕಾಡಾನೆಯನ್ನು ಹಿಡಿದು ಬೇರೆ ಕಾಡಿಗೆ ರವಾನಿಸಬೇಕು ಎಂದು ಅಧಿಕಾರಿಗಳಲ್ಲಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.